ಕೆಯುಡಬ್ಲ್ಯುಜೆ ವಿಶೇಷ ಪ್ರಶಸ್ತಿಗೆ ಪಿ.ಬಿ.ಹರೀಶ್ ರೈ ಆಯ್ಕೆ

0

ಮಂಗಳೂರು‌: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ)ದ 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೆಯುಡಬ್ಲ್ಯುಜೆ ವಿಶೇಷ ಪ್ರಶಸ್ತಿಗೆ ‌ವಿಜಯವಾಣಿ ಮಂಗಳೂರು ಮುಖ್ಯ ವರದಿಗಾರ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ.


ಪತ್ರಿಕೋದ್ಯಮದಲ್ಲಿ 3 ದಶಕದ ಅನುಭವ ಹೊಂದಿರುವ ಪಿ.ಬಿ.ಹರೀಶ್ ರೈ ಅವರು ಕುಕ್ಕೆ ಸುಬ್ರಹ್ಮಣ್ಯದವರಾಗಿದ್ದು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತ ಮಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷ ಹಾಗೂ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿದ್ದಾರೆ. ದಾವಣಗೆರೆಯಲ್ಲಿ ಫೆ. 3 ಮತ್ತು 4 ರಂದು ನಡೆಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here