ಫೆ.2: ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆ- ಧಾರ್ಮಿಕ ಸಭೆ

0

ಪುಣಚ : ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಪುಣಚ ಘಟ ಸಮಿತಿಯ ವಾರ್ಷಿಕೋತ್ಸವದ ಅಂಗವಾಗಿ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆ ಹಾಗೂ ಧಾರ್ಮಿಕ ಸಭೆ ಫೆ.2ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.
ಬೆಳಿಗ್ಗೆ ವೇ.ಮೂ. ಬ್ರಹ್ಮಶ್ರೀ ಚಂದ್ರಶೇಖರ ಉಪಾಧ್ಯಾಯ ಕುರೋಮೂಲೆರವರ ಪೌರೋಹಿತ್ಯದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಶ್ರೀ ಸತ್ಯದತ್ತ ವೃತಪೂಜೆ ಆರಂಭಗೊಳ್ಳಲಿದೆ.
ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಸ್‌.ಆರ್.ರಂಗಮೂರ್ತಿ, ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಪುಣಚ ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟಿಕಲ್ಲು, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಉರ್ವ ಭಾಗವಹಿಸಲಿದ್ದಾರೆ. ವಿಶೇಷ ಆಕರ್ಷಣೆಯಾಗಿ ಸಿಂಗಾರಿ ಮೇಳದ ಚೆಂಡೆ ವಾದನ ಕಾರ್ಯಕ್ರಮಕ್ಕೆ ಮೆರುಗು ನೀಡಲಿದೆ. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಒಡಿಯೂರು ಗ್ರಾಮ ವಿಕಾಸ ಯೋಜನೆ ಪುಣಚ ಘಟ ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here