ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ದಿವಾಕರ ದಾಸ್ ನೇರ್ಲಾಜೆ ಭೇಟಿ

0

ಪುತ್ತೂರು: ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿ. ಆಡಳಿತ ನಿರ್ದೇಶಕರಾದ ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ ದಿವಾಕರ ದಾಸ್ ನೇರ್ಲಾಜೆರವರು ಫೆ.1 ರಂದು ಭೇಟಿ ನೀಡಿದರು‌.


ಕ್ಷೇತ್ರದ ಪ್ರಧಾನ ಅರ್ಚಕರಾದ ಕೃಷ್ಣ ಬಡಿಕಿಲ್ಲಾಯರವರು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ಸೌಂದರ್ಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರು, ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾಗಿರುವ ಸೌಂದರ್ಯ ಪಿ. ಮಂಜಪ್ಪ,
ಪ್ರಮುಖರಾದ ಪಿ.ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ದೀರಜ್ ಹಿರ್ಕುಡೆಲು, ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ ಎರ್ಕಡಿತ್ತಾಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುದೀರ್ ಪ್ರಸಾದ್ ಆನಾಜೆ, ಲೀಲಾವತಿ ಹಿರ್ಕುಡೆಲು, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಸುಬ್ರಹ್ಮಣ್ಯ ಗೌಡ ಹಣಿಯೂರು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here