ಪುತ್ತೂರು:ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಮಡಿವಾಳರ ಸಂಘದ ಜಂಟಿ ಆಶ್ರಯದಲ್ಲಿ ಶ್ರೀಮಡಿವಾಳ ಮಾಚಿದೇವ ಜಯಂತಿ ದಿನಾಚರಣೆಯು ಫೆ.1ರಂದು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸಂಸ್ಮರಣಾ ಜ್ಯೋತಿ ಬೆಳಗಿಸಿದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಮಾತನಾಡಿ, ಮಾಚಿದೇವ ಅವರ ಜೀವನ ಸಾಧನೆ ಹಾಗೂ ಅವರ ಆದರ್ಶಗಳನ್ನು ವಿವರಿಸಿ, ಮಹಾತ್ಮ ಜಯಂತಿ ಆಚರಣೆಯ ಮಹತ್ವಗಳನ್ನು ತಿಳಿಸಿದರು.ತಾಲೂಕು ಮಡಿವಾಳರ ಸಂಘದ ಅಧ್ಯಕ್ಷ ಪಿ.ಎನ್ ಸುಭಾಶ್ಚಂದ್ರ ಮುಖ್ಯ ಅತಿಥಿಯಾಗಿದ್ದರು. ತಹಶೀಲ್ದಾರ್ ಪುರಂದರ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಕಚೇರಿಯ ದಯಾನಂದ ಸ್ವಾಗತಿಸಿ, ವಂದಿಸಿದರು. ಉಪ ತಹಶೀಲ್ದಾರ್ ಸುಲೋಚನ ಪಿ.ಕೆ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.