ಅಂಬಿಕಾದ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು : ನಗರದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ ಇ ಇಲ್ಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಳದ ವಿದ್ಯಾರ್ಥಿಗಳು ಇತ್ತೀಚಿಗೆ ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಸ್ಕೌಟ್ ಮತ್ತು ಗೈಡ್ಸ್ ನ ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿ ದೈವಸ್ಥಾನದ ಹೊರಭಾಗದ ಸುತ್ತು ಆವರಣವನ್ನು ಸ್ವಚ್ಛಗೊಳಿಸಿದರು. ಈ ಕಾರ್ಯಕ್ರಮ ನಡೆಸುವಲ್ಲಿ ಸಹಕರಿಸಿದ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಸ್ಕೌಟ್ ಮಾಸ್ಟರ್ ಸತೀಶ್ ಇರ್ದೆ ಹಾಗೂ ಗೈಡ್ಸ್ ಶಿಕ್ಷಕಿ ಚಂದ್ರಕಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here