ಹಾಡಹಗಲು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಖದೀಮರು-ಪ್ರಕರಣ ಭೇಧಿಸಿದ ಬೆಳ್ಳಾರೆ ಪೊಲೀಸರು-ಮುಕ್ವೆ ಮತ್ತು ಉದ್ಯಾವರದ ಇಬ್ಬರ ಬಂಧನ

0

ಪುತ್ತೂರು: ಜ.11ರಂದು ಹಾಡಹಗಲು ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಬಂಧಿತ ಆರೋಪಿಗಳನ್ನು ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42) ಎಂದು ಗುರುತಿಸಲಾಗಿದೆ. ಬಂಧಿತರಿಂದ ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ 1,00,000/- ಮೌಲ್ಯದ ಸ್ಕೂಟರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಸದ್ರಿ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ. ಬಿ ರಿಷ್ಯಂತ್ ಐ ಪಿ ಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಕೆ ಎಸ್ ಪಿ ಎಸ್ ಮತ್ತು ರಾಜೇಂದ್ರ ಕೆಎಸ್‌ಪಿಎಸ್ ರವರುಗಳ ಮುಂದಾಳತ್ವದಲ್ಲಿ, ಅರುಣ್ ನಾಗೇಗೌಡ, ಪೊಲೀಸ್ ಉಪಾಧೀಕ್ಷಕರು ಪುತ್ತೂರು ಉಪವಿಭಾಗರವರ ನೇತೃತ್ವದ, ಸುಳ್ಯ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ ರವರು, ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರುಗಳಾದ ಸಂತೋಷ್ ಬಿ ಪಿ ರವರು ಮತ್ತು ಅಶೋಕ್ ಸಿಎಂ ರವರ ಎರಡು ವಿಶೇಷ ತನಿಖಾ ತಂಡಗಳು ಕಾರ್ಯಾಚರಿಸಿರುತ್ತದೆ. ಸದ್ರಿ ತನಿಖಾ ತಂಡದಲ್ಲಿ ಎ ಎಸ್ ಐ ದಾಮೋದರ ನಾಯ್ಕ, ಸಿಬ್ಬಂದಿಗಳಾದ ನವೀನ್ ಕಟ್ಟತ್ತಾರು, ಸತೀಶ್ ಬಿ, ಕೃಷ್ಣಪ್ಪ, ಚಂದ್ರಶೇಖರಗೌಡ, ಚಂದ್ರಶೇಖರ ಗೆಜ್ಜಳ್ಳಿ, ಮಂಜುನಾಥ, ಚೇತನ, ಪ್ರವೀಣ ಬಾರ್ಕಿ, ಸಂತೋಷ ಕೆ ಜಿ, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ, ಸಂಪತ್ ರವರುಗಳು ಕಾರ್ಯನಿರ್ವಹಿಸಿರುತ್ತಾರೆ.

LEAVE A REPLY

Please enter your comment!
Please enter your name here