ಅರುಣ್ ಕುಮಾರ್ ಪುತ್ತಿಲ ಅವರಿಗೆ ಜವಾಬ್ದಾರಿಯುತ ಸ್ಥಾನ ನೀಡಿದಲ್ಲಿ ಪುತ್ತಿಲ ಪರಿವಾರ ಮಾತೃ ಪಕ್ಷದೊಂದಿಗೆ ವಿಲೀನವಾಗಲಿದೆ- ಪ್ರಸನ್ನ ಕುಮಾರ್ ಮಾರ್ತ
ಪುತ್ತೂರು: ವಿಧಾನಸಭಾ ಚುನಾವಣೆಯ ಬಳಿಕ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೋ ಎಂಬ ಭಾವನೆ ಆತಂಕ ಅಡ್ಡಿ ನಿವಾರಣೆ ಮಾಡುವ ನಿಟ್ಟಿನಲ್ಲಿ
ಸಂಘಟನೆ ಜಿಲ್ಲೆಯಾದ್ಯಂತ ಯಾವ ರೀತಿ ಯೋಜನೆ ಮಾಡಬೇಕು, ಸಂಘಟನೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರ ಜಿಲ್ಲಾ ಸಮಾಲೋಚನಾ ಸಮಾವೇಶ ಫೆ.5 ರಂದು ಪುತ್ತೂರು ಸಾಲ್ಮರ ಕೊಟೇಚಾ ಹಾಲ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪುತ್ತಿಲ ಪರಿವಾರದ ಮುಖಂಡ, ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ನಾವೆಲ್ಲರೂ ಕೂಡಾ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂ ಸೇವಕರು. ರಾಷ್ಟ್ರೀಯ ವಿಚಾರ ಧಾರೆಯ ಜೊತೆ ನಮ್ಮ ಬದುಕು. ವಿಧಾನಸಭಾ ಚುನಾವಣೆಗೆ ಕಾರ್ಯಕರ್ತರ ಆಸೆಯಂತೆ ಹೆಜ್ಜೆ ಇಟ್ಟಿದ್ದೆವು. ಪ್ರಸ್ತುತ ಸನ್ನಿವೇಶದಲ್ಲಿ ಪಕ್ಷದ ಮತ್ತು ಸಂಘದ ಹಿರಿಯರ ಯೋಚನೆಯಂತೆ ನಡೆಯಲಿದ್ದೇವೆ.ಮುಂದಿನ ನಡೆಗೆ ಕಾರ್ಯಕರ್ತರ ವಿರೋಧ ಇಲ್ಲ ಎಂಬುದನ್ನು ಸ್ಪಷ್ಟ ಪಡಿಸುತ್ತೇನೆ ಎಂದು ಹೇಳಿದ್ದಾರೆ.
ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಮಾತನಾಡಿ ಮಾತೃ ಪಕ್ಷದ ಬಗ್ಗೆ , ಸಂಘದ ಬಗ್ಗೆ ಸಂಪೂರ್ಣ ಗೌರವವಿದೆ. ಅರುಣ್ ಕುಮಾರ್ ಪುತ್ತಿಲ ಅವರಿಗೆ ಜವಾಬ್ದಾರಿಯುತ ಸ್ಥಾನ ನೀಡಿದಲ್ಲಿ ಪುತ್ತಿಲ ಪರಿವಾರ ಮಾತೃ ಪಕ್ಷದೊಂದಿಗೆ ವಿಲೀನವಾಗಲಿದೆ.ಒಂದು ವೇಳೆ ಅಧ್ಯಕ್ಷ ಪಧವಿಯನ್ನು ನೀಡಲು ವಿಫಲವಾದರೆ ಈ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ರಾಜಕೀಯ ನಡೆಯಲಿದ್ದು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ.ಕಳೆದ ಎರಡು ತಿಂಗಳಿಂದ ಸಂಧಾನದ ಮಾತುಕತೆ ಬಗ್ಗೆ ಪತ್ರಿಕೆಗಳಲ್ಲಿ ವರದಿ ಬರುತಿತ್ತು. ಇವತ್ತಿ ನಾವೇ ಮಾಧ್ಯಮದ ಮುಂದೆ ವಿಚಾರವನ್ನು ಸ್ಪಷ್ಟಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಶಾಂಕ ಕೊಟೇಚಾ , ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಶ್ರೀನಿವಾಸ ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಪುತ್ತಿಲ ಪರಿವಾರದ ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಿಕಾಪ್ರಸಾದ್, ವಕೀಲ ರಾಜೇಶ್ ಕೆ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.