ಉಪ್ಪಿನಂಗಡಿ: ಬೀದಿ ನಾಯಿಗಳ ಸಂತಾನೋತ್ಪತ್ತಿಯನ್ನು ನಿಯಂತ್ರಿಸಲು ಉಪ್ಪಿನಂಗಡಿ ಗ್ರಾ.ಪಂ. ಮುಂದಾಗಿದ್ದು, ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಆ ದಿನದಂದು ಸಾಕು ನಾಯಿಗಳನ್ನು ಬಿಡಬಾರದೆಂದು ಎಚ್ಚರಿಕೆ ನೀಡಿದೆ.
ಫೆ.8 ಮತ್ತು 9ರಂದು ಉಪ್ಪಿನಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಒಳಪಡಿಸುವ ಕಾರ್ಯ ನಡೆಯಲಿದ್ದು, ಆ ದಿನಗಳಂದು ಸಾಕು ನಾಯಿಗಳನ್ನು ಮನೆಯಲ್ಲಿ ಕಟ್ಟಿಹಾಕಬೇಕೆಂದು ಉಪ್ಪಿನಂಗಡಿ ಗ್ರಾ.ಪಂ. ಪ್ರಕಟನೆಯಲ್ಲಿ ತಿಳಿಸಿದೆ.