ಅಂತರ್ ರಾಷ್ಟ್ರೀಯ ವಿಜ್ಞಾನ ಮೇಳ : ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ಭಾಗಿ

0

ಪುತ್ತೂರು:ಹರಿಯಾಣದ ಫರೀದಾಬಾದ್ ನಲ್ಲಿ ಜ17 ರಿಂದ 20ರವರೆಗೆ ನಡೆದ ಅಂತರಾಷ್ಟ್ರೀಯ ವಿಜ್ಞಾನ ಮೇಳ 2k23 ವಿಜ್ಞಾನ ಪ್ರದರ್ಶನದಲ್ಲಿ ಅಕ್ಷಯ ಕಾಲೇಜಿನ ಐದು ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ. ಪ್ರಥಮ ಬಿಕಾಂ ಪದವಿ ವಿಭಾಗದ ಉಜ್ವಲ್ ನಾಯಕ್, ಸಾಯಿ ಪ್ರಸಾದ್, ಘನಶ್ಯಾಮ್, ಪ್ರಥಮ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿನಿಯರಾದ ಕೀರ್ತಿಕ ಹಾಗೂ ಶೃತಿ ರಾಜ್ಯಮಟ್ಟದ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here