ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ಪುತ್ತೂರು ತಿಂಗಳಾಡಿಯ ವ್ಯಕ್ತಿ ಆತ್ಮಹತ್ಯೆ

0

ಪುತ್ತೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಫೆ.7) ಬೆಳಿಗ್ಗೆ ನಡೆದಿದೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ತಿಂಗಳಾಡಿ ಮೂಲದ ವಸಂತ ಎಂಬವರು ಪಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು ಪತ್ನಿ ಗೀತಾ, ಪುತ್ರ ನಾಗೇಶ್, ಪುತ್ರಿಯರಾದ ನಳಿನಿ ಹಾಗೂ ನಯನರವರನ್ನು ಅಗಲಿದ್ದಾರೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ.

LEAVE A REPLY

Please enter your comment!
Please enter your name here