ಪುತ್ತೂರು: ಫೆ.9 ರಂದು ಕಾಟುಕುಕ್ಕೆ ಸುಬ್ರಾಯ ದೇವಸ್ಥಾನದಲ್ಲಿ 16 ನೇ ವರ್ಷದ ಪುರಂದರ ದಾಸರ ಆರಾದನೋತ್ಸವ ಪ್ರಯುಕ್ತ ಕಾಟುಕುಕ್ಕೆ ಸುಬ್ರಾಯ ದೇವರಿಗೆ ಮಹಾಶತರುದ್ರಾಭಿಷೇಕ ಮತ್ತು 1 ಸಾವಿರ ಸರ್ವಸೇವೆ, 1 ಸಾವಿರದ ಸಂಕೀರ್ತನಾ ಸಮರ್ಪಣೆ ಮತ್ತು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ಸ್ವರ್ಣಭಿಕ್ಷಾಸೇವೆ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಭಜನಾ ತಂಡಗಳಿಂದ ಬೃಹತ್ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆಗೆ ಫೆ.8ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಲ್ಲಿ ಚಾಲನೆ ನೀಡಲಾಯಿತು.
ಮಾಜಿ ಶಾಸಕ ಸಂಜೀವ ಮಠಂದೂರು ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ ಅವರು ಮಾತನಾಡಿದರು. ಈ ಸಂದರ್ಭ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ವಿಷ್ಣುಪ್ರಸಾದ್, ರಾಮಚಂದ್ರ ಮಣಿಯಾಣಿ, ಪುತ್ತೂರು ನಗರಸಭೆ ಮಾಜಿ ಅಧ್ಯಕ್ಷ ಕೆ.ಜೀವಂಧರ್ ಜೈನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಯುವ ಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು, ಪುರುಷೋತ್ತಮ ಮುಂಗ್ಲಿಮನೆ, ತಾ.ಪಂ ಮಾಜಿ ಸದಸ್ಯೆ ದಿವ್ಯಾ ಪುರುಷೋತ್ತಮ, ಹರಿಪ್ರಸಾದ್ ಆಳ್ವ, ಅಜಿತ್ ರೈ ಹೊಸಮನೆ, ದಿನೇಶ್ ಪಂಜಿಗ, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಸುರೇಶ್ ಆಳ್ವ, ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್ ರಾವ್ ಬಪ್ಪಳಿಗೆ, ಉಷಾ ಮುಳಿಯ, ಸ್ತ್ರೀಶಕ್ತಿ ಸಂಘ ಶಾಂತಿ ಟಿ ಹೆಗ್ಗಡೆ, ವೈದೇಹಿ ವೈಷ್ಣವಿ ಭಜನಾ ಮಂಡಳಿ ಅಧ್ಯಕ್ಷೆ ಪ್ರೇಮಲತಾ ರಾವ್ ಸ್ವಾಗತಿಸಿ, ಕಾಟುಕುಕ್ಕೆ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ಪರಮೇಶ್ವರಿ ವಂದಿಸಿದರು. ಕಿರಣ್ ಬಲ್ನಾಡು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.