ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ- ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆಮಂತ್ರಣ

0

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶೋತ್ಸವದ ನಡೆಯಲಿದ್ದು,ಇದರ ಆಮಂತ್ರಣವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ದೇವಸ್ಥಾನದ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು ,ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ರೈ ನಳೀಲು, ಕಾರ್ಯಾಲಯ ಸಮಿತಿ ಸಂಚಾಲಕರಾದ ಸುರೇಶ್ ರೈ ಕೊಲ್ಯ ವಿಟ್ಲ,ಸಹ ಸಂಚಾಲಕ ಅಶಿತ್ ಶೆಟ್ಟಿ ಯು.ಆರ್.,ಪ್ರಚಾರ ಸಮಿತಿಯ ಸಂಚಾಲಕ ಸುಧಾಕರ ರೈ ಪಾಲ್ತಾಡಿ ಹೊಸಮನೆ,ಸಹ ಸಂಚಾಲಕ ಪ್ರವೀಣ್ ಚೆನ್ನಾವರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here