ನೆಲ್ಯಾಡಿ: ಉಜ್ವಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ನೆಲ್ಯಾಡಿ ಇದರ ವಾರ್ಷಿಕ ಮಹಾಸಭೆ ಫೆ.7ರಂದು ನೆಲ್ಯಾಡಿ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಒಕ್ಕೂಟದ ಅಧ್ಯಕ್ಷೆ ಹೇಮಾವತಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಜಗತ್‌ರವರು ಎನ್‌ಆರ್‌ಎಲ್‌ಎಂ ಸಂಸ್ಥೆಯ ಬಗ್ಗೆ, ಒಕ್ಕೂಟದಿಂದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ, ಘನತ್ಯಾಜ್ಯ ಘಟಕದ ಬಗ್ಗೆ, ಸಂಜೀವಿನಿ ಸಂತೆ, ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷರಾದ ಸಲಾಂ ಬಿಲಾಲ್, ಉಪಾಧ್ಯಕ್ಷೆ ರೇಷ್ಮಾಶಶಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದ, ಲೆಕ್ಕಸಹಾಯಕ ಅಂಗು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಪುಷ್ಪಾವತಿ, ತಾಲೂಕು ವಲಯ ಮೇಲ್ವಿಚಾರಕಿ ನಳಿನಾಕ್ಷಿ, ಒಕ್ಕೂಟದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಂಬಿಕೆ ವನಜಾ ಕಾರ್ಯಕ್ರಮ ನಿರೂಪಿಸಿದರು. ಎಲ್‌ಸಿಆರ್‌ಪಿ ಮೋಹಿನಿ ಸ್ವಾಗತಿಸಿದರು. ಕೃಷಿ ಸಖಿ ಜಯಲಕ್ಷ್ಮಿ ವಂದಿಸಿದರು. ಸ್ವಸಹಾಯ ಸಂಘಗಳ ಸದಸ್ಯೆಯರು, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಇಲಾಖೆಯವರು, ಆಶಾ ಕಾರ್ಯಕರ್ತೆಯರು, ಒಕ್ಕೂಟದ ಸದಸ್ಯೆಯರು ಉಪಸ್ಥಿತರಿದ್ದರು. ಮಹಾಸಭೆ ಅಂಗವಾಗಿ ಸಂಜೀವಿನಿ ಒಕ್ಕೂಟದ ಸದಸ್ಯೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಿತು.