ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಮಹಿಳಾ ಗ್ರಾಮಸಭೆ ಫೆ.7ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ನೆಲ್ಯಾಡಿ ಗ್ರಾ.ಪಂ.ಉಪಾಧ್ಯಕ್ಷೆ ರೇಷ್ಮಾಶಶಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಪುಷ್ಪಾವತಿಯವರು ಇಲಾಖೆಯಿಂದ ಮಹಿಳೆಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಮಹಿಳಾ ಗ್ರಾಮಸಭೆಯ ಉದ್ದೇಶದ ಬಗ್ಗೆ ತಿಳಿಸಿದರು. ಸಂಜೀವಿನಿ ಒಕ್ಕೂಟದ ಮೇಲ್ವಿಚಾರಕಿ ನಳಿನಾಕ್ಷಿ, ಆರೋಗ್ಯ ಸಹಾಯಕಿ ಲೀಲಾ ಅವರು ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಗ್ರಾ.ಪಂ.ಸದಸ್ಯರಾದ ಜಯಾನಂದ ಬಂಟ್ರಿಯಾಲ್, ರವಿಪ್ರಸಾದ್ ಶೆಟ್ಟಿ ರಾಮನಗರ, ಅಬ್ದುಲ್ ಜಬ್ಬಾರ್, ಮೊಹಮ್ಮದ್ ಇಕ್ಬಾಲ್, ಆನಂದ ಪಿಲವೂರು, ಪುಷ್ಪಾ ಪಡುಬೆಟ್ಟು, ಜಯಂತಿ ಮಾದೇರಿ, ಜಯಲಕ್ಷ್ಮೀಪ್ರಸಾದ್, ಉಜ್ವಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ಹೇಮಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೆಕ್ಕ ಸಹಾಯಕ ಅಂಗು ವಂದಿಸಿದರು. ನಳಿನಾಕ್ಷಿ ಪ್ರಾರ್ಥಿಸಿದರು. ಗ್ರಾ.ಪಂ.ಸಿಬ್ಬಂದಿಗಳು ಸಹಕರಿಸಿದರು.ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬಿ.ಪಿ.,ಶುಗರ್ ತಪಾಸಣೆಯೂ ಈ ಸಂದರ್ಭದಲ್ಲಿ ನಡೆಯಿತು.