ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೇರ್ಲ ಸ್ವಾತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

0

ಕೆಯ್ಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದೇರ್ಲ ಸ್ವಾತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಕೆಯ್ಯೂರಿನ ಜಯಕರ್ನಾಟಕ ಸಭಾಭವನದಲ್ಲಿ ಫೆ8ರಂದು ನಡೆಯಿತು.

ದೇರ್ಲ ಜ್ಞಾನ ವಿಕಾಸ  ಕೇಂದ್ರದ ಸದಸ್ಯೆ ಗೀತಾ ರೈ ದೇರ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಶಶಿಧರ್ ದೀಪ ಪ್ರಜ್ವಲಿಸುವ ಮೂಲಕ  ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮ ಜ್ಞಾನವಿಕಾಸ. ಇದರ ಮೂಲಕ ನಡೆಯುವ ವಿವಿಧ ಕಾರ್ಯಕ್ರಮಗಳು ಮಹಿಳೆಯನ್ನು ಮಾನಸಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರನ್ನಾಗಿಸಿ ಸಮಾಜದ ಮುಖ್ಯ ವಾಹಿನಿಗೆ ಕರೆತಂದಿದೆ. ಇನ್ನು ಉತ್ತಮ ಕಾರ್ಯಕ್ರಮಗಳು ನಿಮ್ಮ ಕೇಂದ್ರದಲ್ಲಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೆಯ್ಯೂರು ಗ್ರಾ.ಪಂ ಸದಸ್ಯೆ ಮೀನಾಕ್ಷಿ .ವಿ ರೈ ಮಾತನಾಡಿ, ಜ್ಞಾನವಿಕಾಸ ಮಹಿಳೆಯರ ಪ್ರತಿಭೆಗಳ ಪ್ರದರ್ಶನಕ್ಕೆ ಸಿಕ್ಕ ಒಂದು ಒಳ್ಳೆಯ ಅವಕಾಶ. ಇದನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ ಎಂದು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಿಗೆ ವಿವಿಧ ಆಟೋಟ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿಜೇತರಿಗೆ ಬಹುಮಾನವನ್ನು ನೀಡಲಾಯಿತು. ಕೇಂದ್ರದ ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿ ಮನರಂಜಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಬೇಬಿ ಪೂಜಾರಿ ದೇರ್ಲ, ವಲಯದ ಮೇಲ್ವಿಚಾರಕರು, ಪದಾಧಿಕಾರಿಗಳು, ಜ್ಞಾನವಿಕಾಸ, ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರು, ಮಕ್ಕಳು, ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಧಿಕಾರಿ ಕಾವ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಸೇವಾಪ್ರತಿನಿಧಿ ಲತಾ ಸ್ವಾಗತಿಸಿ, ಕೇಂದ್ರದ ಸಂಯೋಜಕಿ ವಿದ್ಯಾಶ್ರೀ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here