ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶೋತ್ಸವ
ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶೋತ್ಸವದ ನಡೆಯಲಿದ್ದು, ಇದರ ಆಮಂತ್ರಣವನ್ನು ಜಿಲ್ಲೆಯ ಸಂತರಿಗೆ ನೀಡಲಾಯಿತು.
ಸುಬ್ರಹ್ಮಣ್ಯ ಸಂಪುಟ ನರಸಿಂಹಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರಿಗೆ, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಅವರಿಗೆ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ನೀಡಿ ಬ್ರಹ್ಮಕಲಶೋತ್ಸವಕ್ಕೆ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು , ಕಾರ್ಯಾಲಯ ಸಮಿತಿ ಸಂಚಾಲಕರಾದ ಸುರೇಶ್ ರೈ ಕೊಲ್ಯ ವಿಟ್ಲ,ಪ್ರಚಾರ ಸಮಿತಿಯ ಸಂಚಾಲಕ ಸುಧಾಕರ ರೈ ಪಾಲ್ತಾಡಿ ಹೊಸಮನೆ,ಸಹ ಸಂಚಾಲಕ ಪ್ರವೀಣ್ ಚೆನ್ನಾವರ, ಸತ್ಕಾರ ಸಮಿತಿ ಸಂಚಾಲಕ ರಾಮಣ್ಣ ರೈ ಬಾಕಿಜಾಲು ಉಪಸ್ಥಿತರಿದ್ದರು.