ಸವಣೂರು: ವಿಜೃಂಭಣೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

0

ಪುತ್ತೂರು: ಸವಣೂರು – ಬೆಳ್ಳಾರೆ ರಸ್ತೆಯ ಪರಣೆಯಿಂದ ಒಂದು ಕಿ.ಮೀ, ದೂರದಲ್ಲಿ ಇರುವ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಫೆ.7 ಮತ್ತು 8ರಂದು ವಿಜೃಂಭಣೆಯಿಂದ ಜರಗಿತು.

ಫೆ.7ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ ದಿನದ ಪೂಜೆ ಜರಗಿದ ಬಳಿಕ ಮಹಾಪೂಜೆ ನಡೆಯಿತು. ಬಳಿಕ ಪಲ್ಲಪೂಜೆಯನ್ನು ಮಾಡಲಾಯಿತು. ಸಹಕಾರ ರತ್ನ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈಯವರ ಸೇವಾರ್ಥವಾಗಿ ಅನ್ನಸಂತರ್ಪಣೆ ಜರಗಿತು. ಸಂಜೆ ದೀಪಾರಾಧನೆ, ತಾಯಂಭಕ ಸೇವೆ, ರಂಗಪೂಜೆ, ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ ನಡೆಯಿತು. ರಾತ್ರಿ ಗ್ರಾಮಸ್ಥರು ಮತ್ತು ಪರವೂರ ದಾನಿಗಳು ಅನ್ನಸಂತರ್ಪಣೆಯ ಸೆವಾಕರ್ತರಾಗಿದ್ದರು. ಫೆ.8ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ವೈದಿಕ ಮಂತ್ರಾಕ್ಷತೆ ನಡೆಯಿತು. ಮಧ್ಯಾಹ್ನ ಜರಗಿದ ಅನ್ನಸಂತರ್ಪಣೆಯ ಸೇವಾಕರ್ತರಾಗಿ ಸವಣೂರುಗುತ್ತು ಕುಟುಂಬಸ್ಥರು ಸಹಕರಿಸಿದರು. ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರುಗಳರವರ ನೇತೃತ್ವದಲ್ಲಿ ಜರಗಿದ ದೇವಳದ ಉತ್ಸವಾಧಿಗಳು ಕಾರ್‍ಯಕ್ರಮದಲ್ಲಿ ದೇವಾಲಯದ ಆಡಳಿತದಾರ ಸವಣೂರುಗುತ್ತು ರತ್ನಾಕರ ಶೆಟ್ಟಿ ಮತ್ತು ಕುಟುಂಬಸ್ಥರು, ಆಡಳಿತ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಉತ್ಸವ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಕಾರ್‍ಯದರ್ಶಿ ಬೆಳಿಯಪ್ಪ ಗೌಡ ಚೌಕಿಮಠ, ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ ಮತ್ತು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ್ ಸುಣ್ಣಾಜೆ ಸೇರಿದಂತೆ ಸಾವಿರಾರು ಮಂದಿ ಊರ ಮತ್ತು ಪರವೂರ ಭಕ್ತಾಧಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here