ಪುತ್ತೂರು: ಸಂಪ್ಯ ಪೊಲೀಸ್ ಠಾಣೆ ಬಳಿಯ ಮಿನಿ ಹೊಟೇಲ್ ನಡೆಸುತ್ತಿದ್ದ ಬಾಬು ಪಿ (71 ವ) ಎಂಬವರು ಫೆ.8ರ ತಡ ರಾತ್ರಿ ನಿಧನರಾದರು.
ಫೆ.8ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಮಾಹಿತಿ ತಿಳಿದ ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿಯೇ ಅವರನ್ನು ಪುತ್ತೂರು ಅಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಕರಿಸಿದ್ದರು. ಬಳಿಕ ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ 108 ಕರೆದೊಯ್ದರು. ಆದರೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.