ಪುತ್ತೂರು: ಪುತ್ತೂರು ಬಪ್ಪಳಿಗೆ ನಿವಾಸಿ ಮೂಸಾ ಹಾಜಿ ನಿಧನರಾಗಿದ್ದಾರೆ. ಪುತ್ತೂರು ನಗರ ಮಹಿಳಾ ಠಾಣೆಯ ಮುಂಭಾಗದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಮೂಸಾ ಹಾಜಿ ಅವರು ಕೆಲದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.