ಫೆ.11: ಸರ್ವೆ ಶ್ರೀ ನಾಗ ಮತ್ತು ಶ್ರೀ ರಕ್ತೇಶ್ವರಿ ಕ್ಷೇತ್ರದಲ್ಲಿ ದುರ್ಗಾನಮಸ್ಕಾರ ಪೂಜೆ, ನೇಮೋತ್ಸವ

0

ಪುತ್ತೂರು: ಶ್ರೀ ರಕ್ತೇಶ್ವರಿ ಸೇವಾ ಸಮಿತಿ ಸರ್ವೆ ಇದರ ಆಶ್ರಯದಲ್ಲಿ ಸರ್ವೆ ಶ್ರೀ ನಾಗ ಮತ್ತು ಶ್ರೀ ರಕ್ತೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ, ದೈವಗಳ ನೇಮೋತ್ಸವ ಫೆ.11ರಂದು ನಡೆಯಲಿದೆ ಎಂದು ಉದಯ ಕುಮಾರ್ ತಂತ್ರಿ ಅವರು ತಿಳಿಸಿದ್ದಾರೆ.


ಬೆಳಿಗ್ಗೆ 8 ಗಂಟೆಯಿಂದ ಶ್ರೀ ಮಹಾಗಣಪತಿ ಹೋಮ, ಶ್ರೀ ನಾಗದೇವರಿಗೆ ಪಂಚಾಮೃತ ಅಭಿಷೇಕ, ನವಕ ಕಲಶ, ತಂಬಿಲ ಸೇವೆ, ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆಯಲಿದೆ. ಸಂಜೆ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ಹಾಗೂ ರಾತ್ರಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here