ನೆಲ್ಯಾಡಿ: ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, ಮೂಡಪ್ಪ ಸೇವೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಫೆ.13ರಂದು ನಡೆಯಲಿದೆ.
ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8 ಗಂಟೆಯಿಂದ 108 ಕಾಯಿ ಗಣಹೋಮ, ರಾತ್ರಿ 9 ಗಂಟೆಗೆ ಮೂಡಪ್ಪ ಸೇವೆ ನಡೆಯಲಿದೆ.
ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯ ತನಕ ಉಪ್ಪಿನಂಗಡಿ ವಾಮನ್ ನಾಯಕ್ ಅವರ ನೇತೃತ್ವದಲ್ಲಿ ಆಸಕ್ತ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ. ಸಂಜೆ 5.30ರಿಂದ ಶ್ರೀ ಕ್ಷೇತ್ರ ಸೌತಡ್ಕದ ಶಿಶುಮಂದಿರದ ವಿದ್ಯಾರ್ಥಿಗಳಿಂದ ಚಿಣ್ಣರ ಚಿಲಿಪಿಲಿ, 6.30ರಿಂದ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪುತ್ತೂರು ಇದರ ಕೊಕ್ಕಡ ಶಾಖೆಯ ವಿದ್ಯಾರ್ಥಿಗಳಿಂದ ವಿದ್ವಾನ್ ಬಿ.ದೀಪಕ್ ಕುಮಾರ್, ವಿದುಷಿ ಪ್ರೀತಿಕಲಾ, ವಿದ್ವಾನ್ ಬಿ.ಗಿರೀಶ್ಕುಮಾರ್ ಅವರ ನಿರ್ದೇಶನದಲ್ಲಿ ನೃತ್ಯಾಂಜಲಿ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಝೀ ಕನ್ನಡ ವಾಹಿನಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಖ್ಯಾತಿಯ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ನೃತ್ಯ ತಂಡ ಎಂದು ಹೆಗ್ಗಳಿಕೆಗೆ ಪಾತ್ರವಾದ ತುಳು ಚಲನಚಿತ್ರ ನಿರ್ದೇಶಕರಾದ ವಿನೋದ್ ರಾಜ್ರವರ ನೇತೃತ್ವದ ’ಎಕ್ಸ್ಟೀಮ್ ಡ್ಯಾನ್ಸ್ ಕ್ರ್ಯೂ’ ಬಿ.ಸಿ.ರೋಡ್ ತಂಡದವರಿಂದ ನೃತ್ಯ-ಗಾನ-ಸಂಭ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.