ಪುತ್ತೂರು: “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದಡಿ ರಾಜ್ಯದ ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶಾಲಾ ಹಳೆ ವಿದ್ಯಾರ್ಥಿಗಳ ಸಂಘ ರಚಿಸುವ ಬಗ್ಗೆ ಸರಕಾರ ಕರೆ ನೀಡಿತು. ಈ ನಿಟ್ಟಿನಲ್ಲಿ ಸಾಮೆತ್ತಡ್ಕ ಸ ಹಿ. ಪ್ರಾ.ಶಾಲೆಯಲ್ಲಿ ಫೆ.11ರಂದು ನೂತನ ಹಿರಿಯ ವಿದ್ಯಾರ್ಥಿ ಸಂಘ ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಸೀಮಾ ಮತ್ತು ಉಪಾಧ್ಯಕ್ಷರಾಗಿ ಅಶೋಕ್ ಆಚಾರ್ ಆಯ್ಕೆಯಾದರು. ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಮತ್ತು ಜೊತೆ ಕಾರ್ಯದರ್ಶಿಯಾಗಿ ಪಲ್ಲವಿ ಎಸ್ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಣ ತಜ್ಞರಾದ ದಿನೇಶ್ ಕಾಮತ್, ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಗುರುಗಳು ಮರಿಯಾ ಅಶ್ರಫ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.