ಪುತ್ತೂರು: ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕ `ಇಂಟಕ್’ನ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು ಪುನರಾಯ್ಕೆಯಾಗಿದ್ದಾರೆ.
ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿಯಾಗಿರುವ ಜಯಪ್ರಕಾಶ್ ಅವರು ಪ್ರಸ್ತುತ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದು, ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷರಾಗಿ, ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾಗಿ, ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ, ಜಯಕರ್ನಾಟಕ ಕೋಡಿಂಬಾಡಿ ಘಟಕದ ಗೌರವಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಾಸರಗೋಡು ಚಿಪ್ಪಾರು ಕೋಟಿ ಚೆನ್ನಯ ಬ್ರಹ್ಮಬೈದೆರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಜಯಪ್ರಕಾಶ್ ಬದಿನಾರು ಅವರು `ನ್ಯೂಸ್ ಅಕ್ಕರೆ’ಯ ಮುಖ್ಯಸ್ಥರಾಗಿದ್ದಾರೆ. ಪುತ್ತೂರು ತಾಲೂಕು ಇಂಟಕ್ ಅಧ್ಯಕ್ಷರಾಗಿರುವ ಜಯಪ್ರಕಾಶ್‌ರವರನ್ನು ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ ಅವರು ಪುನರಾಯ್ಕೆಗೊಳಿಸಿ ಆದೇಶಿಸಿದ್ದಾರೆ.