ನಮ್ಮ ಸಮುದಾಯವನ್ನು ಕೀಳಾಗಿ ನೋಡದಿರಿ, ರಾಜಕೀಯವಾಗಿ ಸಮುದಾಯದ ಅರ್ಹ ವ್ಯಕ್ತಿಗಳನ್ನು ಕಡೆಗಣಿಸದಿರಿ – ನಮಗಾದ ಅನ್ಯಾಯವನ್ನು ಸರಿಪಡಿಸದಿದ್ದರೆ ಮುಂದಿನ ದಿನ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ – ದ.ಕ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘ ಎಚ್ಚರಿಕೆ

0

ಪುತ್ತೂರು: ಇತ್ತೀಚಿಗಿನ ದಿನಗಳಲ್ಲಿ ನಮ್ಮ ಸಮುದಾಯವನ್ನು ಕೀಳಾಗಿ ಕಾಣುವುದು, ಅವಕಾಶಗಳಿಂದ ವಂಚಿಸುವುದು ಮುಂತಾದ ಬೆಳವಣಿಗಳನ್ನು ಗಮನಿಸಿದ್ದೇವೆ. ರಾಜಕೀಯವಾಗಿ ನಮ್ಮ ಸಮುದಾಯದ ಅರ್ಹ ವ್ಯಕ್ತಿಗಳನ್ನು ಕಡೆಗಣಿಸುವುದು ಕಂಡು ಬಂದಿದೆ. ರಾಜಕೀಯವಾಗಿ ನಮ್ಮ ಸಮುದಾಯದ ಅರ್ಹ ವ್ಯಕ್ತಿಗಳನ್ನು ಕಡೆಗಣಿಸುವುದು ಕಂಡುಬರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮ್ಮ ಸಮುದಾಯ ರಾಜಕೀಯವಾಗಿ ತುಳಿತಕ್ಕೆ ಒಳಗಾಗುತ್ತಿರುವುದು ಕಂಡು ಬರುತ್ತದೆ. ಈ ಜಿಲ್ಲೆಯಲ್ಲಿ 6.50 ಲಕ್ಷಕ್ಕೂ ಅಧಿಕ ಒಕ್ಕಲಿಗರು ವಾಸಿಸುವ ಈ ಜಿಲ್ಲೆಯಲ್ಲಿ 3.80 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಅತೀ ದೊಡ್ಡ ಸಮುದಾಯವಾದರೂ ಯಾವುದೇ ರಾಜಕೀಯ ಪಕ್ಷಗಳಲ್ಲಿ ಉನ್ನತ ಹುದ್ದೆಗಳನ್ನು ನೀಡದೆ ನಮ್ಮ ಸಮುದಾಯದವರು ವಂಚಿತರಾಗಿರುವುದು ನಾವು ಕಾಣುತ್ತಿದ್ದೇವೆ. ಅದರಲ್ಲೂ ಪುತ್ತೂರು, ಸುಳ್ಯ, ಬೆಳ್ತಂಗಡಿಯಲ್ಲಿ ನಮ್ಮ ಸಮುದಾಯದ ಸಂಖ್ಯೆ ಜಾಸ್ತಿ ಇದ್ದಾರೆ. ಮಂಗಳೂರು, ಬಂಟ್ವಾಳದಲ್ಲಿ ಸಂಖ್ಯೆ ಕಡಿಮೆ ಇದ್ದಾರೆ. ಆದುದ್ದರಿಂದ ನಮ್ಮ ಸಮುದಾಯಕ್ಕೆ ಹೆಚ್ಚಿನ ಆದ್ಯತೆಯನ್ನು ರಾಜಕೀಯ ಪಕ್ಷಗಳು ನೀಡುವುದರೊಂದಿಗೆ ಸಾಮಾಜಿಕ ಸಮತೋಲನವನ್ನು ಕಾಪಾಡಿಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇವೆ. ಮುಂಬರುವ ಚುನಾವಣೆಗಳಲ್ಲಿ ನಮ್ಮ ಸಮುದಾಯದ ಅರ್ಹ ಅಭ್ಯರ್ಥಿಗಳಿಗೆ ಅವಕಾಶವನ್ನು ನೀಡಿ ನಮಗಾದ ಅನ್ಯಾಯವನ್ನು ಸರಿಪಡಿಸಬೇಕಾಗಿ ಎಲ್ಲಾ ರಾಜಕೀಯ ಪಕ್ಷದವರಲ್ಲೂ ಕೇಳಿಕೊಳ್ಳುತ್ತಿದ್ದೇವೆ. ಇದು ಸಾಧ್ಯವಾಗದೇ ಹೋದರೆ ಮುಂದಿನ ದಿನಗಳಲ್ಲಿ ನಾವುಗಳು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ದ.ಕ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ ಬಿ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಭಾಸ್ಕರ್ ಗೌಡ ದೇವಸ್ಯ, ಪ್ರಧಾನ ಕಾರ್ಯದರ್ಶಿ ಡಾ. ಎನ್ . ಎ ಜ್ಞಾನೇಶ್ , ಜಂಟಿ ಕಾರ್ಯದರ್ಶಿ ದಾಮೋದರ್ ಗೌಡ, ಕೋಶಾಧಿಕಾರಿ ಕೆ ವಿಶ್ವನಾಥ ಗೌಡ, ಜಂಟಿ ಕೋಶಾಧಿಕಾರಿ ಸೂರಜ್ ಕುಮಾರ್ ಯು, ಪುತ್ತೂರು ಗೌಡ ಸಂಘದ ಅಮರನಾಥ ಗೌಡ, ಗೌರಿ ಬನ್ನೂರು ಸಹಿತ ಹಲವಾರು ಮಂದಿ ಉಪಸ್ಥಿತಿದ್ದರು.

LEAVE A REPLY

Please enter your comment!
Please enter your name here