ಪ್ರಧಾನಿ ಮೋದಿ, ಒಬಿಸಿ ವರ್ಗದವರನ್ನು ಅವಮಾನಿಸಿದ ಆರೋಪ – ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ

0

ರಾಹುಲ್ ಗಾಂಧಿ ಪರಿವಾರದ ಡಿಎನ್ಎ ಸರಿಯಿಲ್ಲ, ಅವರು ದೇಶದ ಕ್ಷಮೆಯಾಚಿಸಬೇಕು – ಆರ್ ಸಿ ನಾರಾಯಣ

ಪುತ್ತೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ಇತರ ಹಿಂದುಳಿದ ವರ್ಗಗಳನ್ನು (ಒಬಿಸಿ) ಅವಮಾನಿಸಿದ್ದಾರೆಂದು ಆರೋಪಿಸಿ ಬಿಜೆಪಿ ಪುತ್ತೂರು ಮಂಡಲ ಮತ್ತು ಬಿಜೆಪಿ ಒಬಿಸಿ ಮೋರ್ಚಾದ ವತಿಯಿಂದ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.

ಬಿಜೆಪಿ ಜಿಲ್ಲಾ ಹಿಂದುಳಿದ ಮೋರ್ಚಾ ಅಧ್ಯಕ್ಷ ಆರ್ ಸಿ ನಾರಾಯಣ ಅವರು ಪ್ರಧಾನಿ ಮೋದಿ ಕುರಿತು ರಾಹುಲ್‌ ಗಾಂಧಿ ಮಾಡಿದ್ದ ಟೀಕೆಗಳನ್ನು ಉಲ್ಲೇಖಿಸಿ ಮಾತನಾಡಿ
ರಾಷ್ಟ್ರ ಸೇವಕನಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಅರಗಿಸಿಕೊಳ್ಳಲಾರದೆ ಕಾಂಗ್ರೆಸ್ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ. ರಾಹುಲ್ ಗಾಂಧಿಯವರು ಈ ದೇಶದ ಹಿಂದುಳಿದ ವರ್ಗಗಳ ಜನರ ಭಾವನೆಯನ್ನು ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ ಸರಕಾರ ಆಡಳಿತದಲ್ಲಿದ್ದಾಗಲೇ ಪ್ರಧಾನಿಯವರ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಲಾಗಿತ್ತು. ಆದರೆ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರನ್ನು ಫೇಕ್ ಒಬಿಸಿ ಎಂದು ಅವಮಾನ ಮಾಡಿಕೊಂಡು ಬಂತು. ಇದಕ್ಕೆ ದೇಶದ ಜನರು ಸರಿಯಾದ ಉತ್ತರ ನೀಡಿದರು. ಇದೀಗ ರಾಹುಲ್ ಗಾಂಧಿ ಅವರು ಪ್ರಧಾನಿ ಹಾಗೂ ಇಡೀ ಒಬಿಸಿ ಸಮುದಾಯವನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಹೀಗಾಗಿ ಇಡೀ ಭಾರತ ಮತ್ತು ಒಬಿಸಿ ಸಮುದಾಯ ಅವರ ವಿರುದ್ಧ ಬೀದಿಗಿಳಿದಿದೆ. ಅವರು ದೇಶದ ಕ್ಷಮೆಯಾಚನೆ ಮಾಡಬೇಕು. ಅವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ಚುನಾವಣೆ ವಿಚಾರವಲ್ಲ. ಆದರೆ ನರೇಂದ್ರ ಮೋದಿಯವರು ಈ ದೇಶದಲ್ಲಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸವಿದೆ‌. ರಾಹುಲ್ ಗಾಂಧಿಯವರ ಪರಿವಾರದ ಡಿಎನ್ಎ ಸರಿಯಿಲ್ಲ. ಹಾಗಾಗಿ ಜಾತಿಯ ವಿಷ ಬೀಜ ಬಿತ್ತುತ್ತಿದ್ದಾರೆ. ಜಾತಿಯ ಮೂಲಕ ವಿಷ ಬೀಜ ಬಿತ್ತಿದ್ದರೆ ನೀವು ನಿರ್ಣಾಮ ಆಗುತ್ತೀರಿ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಬಿಜೆಪಿ‌ ಕಾರ್ಯಕರ್ತರು ರಾಹುಲ್ ಗಾಂಧಿ, ಕಾಂಗ್ರೆಸ್ ಗೆ ಧಿಕ್ಕಾರ ಕೂಗಿದರು. ಬಳಿಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ಸಹಾಯ ಕಮೀಷನರ್ ಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ರಾಹುಲ್ ಗಾಂಧಿ ಪ್ರಧಾನಿಯವರ ಮತ್ತು ದೇಶದ ಹಿಂದುಳಿದ ವರ್ಗಗಳ ಸಮೂಹದ ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ಜಿಲ್ಲಾ ಎಸ್ಟಿ ಮೋರ್ಚಾದ ಅಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಸುರೇಶ್ ಆಳ್ವ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸಹಜ್ ರೈ ಬಳಜ್ಜ, ನಗರಸಭಾ ಮಾಜಿ ಉಪಾಧ್ಯಕ್ಷೆ ವಿದ್ಯಾ ಗೌರಿ, ಸದಸ್ಯರಾದ ಸುಂದರ ಪೂಜಾರಿ ಬಡಾವು, ಗೌರಿ ಬನ್ನೂರು, ಮೋಹಿನಿ, ಮನೋಹರ ಕಲ್ಲಾರೆ, ದೀಕ್ಷಾ, ಲೀಲಾವತಿ, ಬಾಲಚಂದ್ರ, ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಎಸ್ ಅಪ್ಪಯ್ಯ ಮಣಿಯಾಣಿ, ಬಿಜೆಪಿ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ಅಶೋಕ್ ರೈ ಸೊರಕೆ, ರೈತಮೋರ್ಚಾ ಸುರೇಶ್ ಕಣ್ಣರಾಯ, ಒಬಿಸಿ ಮೋರ್ಚಾದ ಮಂಡಲ ಅಧ್ಯಕ್ಷ ಸುನಿಲ್ ದಡ್ಡು, ಯುವ ಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷ ನವೀನ್ ಪಡ್ನೂರು, ತಾ.ಪಂ ಮಾಜಿ ಸದಸ್ಯೆ ದಿವ್ಯಾ ಪುರುಷೋತ್ತಮ್, ಬನ್ನೂರು ಗ್ರಾ.ಪಂ ಉಪಾಧ್ಯಕ್ಷ ಶೀನಪ್ಪ ಕುಲಾಲ್, ಬನ್ನೂರು ಶಕ್ತಿ ಕೇಂದ್ರ ಅಧ್ಯಕ್ಷ ನಾಗೇಶ್ ಟಿ.ಎಸ್, ರತನ್ ರೈ ಕುಂಬ್ರ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here