ಪರ್ಪುಂಜ ಅಂಗನವಾಡಿಗೆ ಕುಂಬ್ರ ವರ್ತಕರ ಸಂಘದಿಂದ ಫ್ಯಾನ್ ಕೊಡುಗೆ

0

ಪುತ್ತೂರು: ಹತ್ತು ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ ಕುಂಬ್ರ ವರ್ತಕರ ಸಂಘವು 20ನೇ ವರ್ಷಾಚರಣೆಯನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಒಂದು ವರ್ಷ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಇದರಂತೆ ಒಳಮೊಗ್ರು ಗ್ರಾಮದ ಪರ್ಪುಂಜ ಅಂಗನವಾಡಿ ಕೇಂದ್ರಕ್ಕೆ ಸಂಘದ ವತಿಯಿಂದ ಸೀಲಿಂಗ್ ಫ್ಯಾನ್ ಅನ್ನು ಫೆ.13 ರಂದು ಕೊಡುಗೆಯಾಗಿ ನೀಡಲಾಯಿತು.


ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯರವರು ಅಂಗನವಾಡಿ ಸಹಾಯಕಿ ರೇಖಾರವರಿಗೆ ಸೀಲಿಂಗ್ ಫ್ಯಾನ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮ್‌ಸುಂದರ ರೈ ಕೊಪ್ಪಳ, ಮಾಜಿ ಅಧ್ಯಕ್ಷರುಗಳಾದ ಎಸ್.ಮಾಧವ ರೈ ಕುಂಬ್ರ, ಮೆಲ್ವಿನ್ ಮೊಂತೆರೋ, ಪ್ರಧಾನ ಕಾರ್ಯದರ್ಶಿ ಭವ್ಯ ರೈ, ಜತೆ ಕಾರ್ಯದರ್ಶಿ ರೇಷ್ಮಾ, ಕಾರ್ಯಕಾರಿ ಸಮಿತಿ ಸದಸ್ಯ ನಿಹಾಲ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here