ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ

0

ನೆಲ್ಯಾಡಿ: ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಫೆ.13ರಂದು ಬೆಳಿಗ್ಗೆ ಭಕ್ತ ಮಹಾಜನರ ಸಹಕಾರದೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ 108 ಕಾಯಿ ಗಣಹೋಮ ನಡೆಯಿತು.


ಬೆಳಿಗ್ಗೆ 8 ಗಂಟೆಯಿಂದ 108 ಕಾಯಿ ಗಣಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ಸಾವಿರಾರು ಮಂದಿ ಭಕ್ತರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದ ಉಪ್ಪಿನಂಗಡಿ ವಾಮನ್ ನಾಯಕ್ ಅವರ ನೇತೃತ್ವದಲ್ಲಿ ಆಸಕ್ತ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ, ಆಡಳಿತಾಧಿಕಾರಿಯೂ ಆಗಿರುವ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here