ಇಂಟರ್ನ್ ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ

0

ಕಡಬ: ಕಡಬ ಪಟ್ಟಣ ಪಂಚಾಯತ್ ವತಿಯಿಂದ ಡೇ-ನಲ್ಮ್ ಅಭಿಯಾನ ಮತ್ತು ಪಿಎಂ ಸ್ವನಿಧಿ ಯೋಜನೆಯಡಿ ಇಂಟರ್ನಶಿಪ್ ತರಬೇತಿಗಾಗಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮ 2023-24ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿದು, ಡೇ-ನಲ್ಮ್ ಅಭಿಯಾನದ ಉಪ ಘಟಕಗಳು ಮತ್ತು ಪಿಎಂ ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ದಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಡುವುದು ತರಬೇತಿ ಉದ್ದೇಶವಾಗಿದೆ. ಆಸಕ್ತರು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ದಿನಾಂಕ:-17/02/2024 ರೊಳಗೆ ಅರ್ಜಿಯನ್ನು ಕಡಬ ಪಟ್ಟಣ ಪಂಚಾಯತ್ ನ ಡೇ-ನಲ್ಮ್ ಶಾಖೆಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯತ್ ನ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸುವAತೆ ಕಡಬ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here