ಬೆಂಗಳೂರು:ಮುಂದಿನ ವರ್ಷದಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ವಿಧಾನಸಭೆಯಲ್ಲಿ ಮಂಗಳವಾರ ಕಾಂಗ್ರೆಸ್‌ನ ಎಚ್.ಡಿ.ರಂಗನಾಥ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವ ಖರ್ಗೆ ಅವರು ಈ ವಿಷಯ ತಿಳಿಸಿದರು.ಪಿಡಿಒಗಳು ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು ಒಪ್ಪಿಗೆ ಕೊಡುತ್ತಿಲ್ಲ.ಇದರಿಂದ ಗ್ರಾಮಗಳಲ್ಲಿನ ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿದೆ. 60ರಿಂದ 70 ಜನ ಪಿಡಿಒಗಳು ಆಪ್ತ ಸಹಾಯಕರಾಗಿ ಹೋದರೆ, ದೊಡ್ಡ ಮಟ್ಟದ ಕೊರತೆ ಆಗುತ್ತದೆ. ಆದ್ದರಿಂದ ಆಪ್ತ ಸಹಾಯಕರನ್ನಾಗಿ ತೆಗೆದುಕೊಳ್ಳುವುದನ್ನು ನಿಲ್ಲಿಸುವುದು ಒಳ್ಳೆಯದು ಎಂದು ಪ್ರಿಯಾಂಕ್ ಹೇಳಿದರು.