ಉಪ್ಪಿನಂಗಡಿ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಾಡಿದ ಸಾಧನೆಗಾಗಿ ಬಜತ್ತೂರು ಗ್ರಾ.ಪಂ.ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಜಂಟಿಯಾಗಿ ಸ್ಥಳೀಯಾಡಳಿತ ಸಂಸ್ಥೆಗಳ ಸಹಯೋಗದೊಂದಿಗೆ ಫೆ.10ರಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ‘ಹೊಳಪು- 2024 ಗ್ರಾಮ ಸರಕಾರದ ದಿಬ್ಬಣ’ ಕಾರ್ಯಕ್ರಮದಲ್ಲಿ ಗ್ರಾ.ಪಂ.ಗೆ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಈ ಸಂದರ್ಭ ಬಜತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಂಗಾಧರ ಪಿ.ಎನ್., ಸದಸ್ಯರಾದ ಸಂತೋಷ್ ಕುಮಾರ್ ಪಂರ್ದಾಜೆ , ಗಂಗಾಧರ ಕೆ.ಎಸ್. ಮೇಲೂರು, ಮೋನಪ್ಪ ಬೆದ್ರೋಡಿ, ಮಾಧವ ಪೂಜಾರಿ ಒರುಂಬೋಡಿ, ಉಮೇಶ್ ಓಡ್ರಪಾಲ್, ಭಾಗೀರಥಿ, ರತ್ನಾ, ಯಶೋಧ, ಪ್ರೇಮ, ಸಿಬ್ಬಂದಿ ರಮೇಶ್, ಮೀನಾಕ್ಷಿ, ಮುಹಮ್ಮದ್ ಉಪಸ್ಥಿತರಿದ್ದರು.