ಪುತ್ತೂರು: ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜುಗಳ ಶಿಕ್ಷಕರ, ಉಪನ್ಯಾಸಕರ, ನಿವೃತ್ತ ಶಿಕ್ಷಕರು, ನಿವೃತ್ತ ಉಪನ್ಯಾಸಕರ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಒಳಗೊಂಡ,ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಕೇಂದ್ರ ಕಛೇರಿಯಾಗಿರುವ ಶಿಕ್ಷಕರ ಸಹಕಾರ ಸಂಘ ನಿಯಮಿತ ಪುತ್ತೂರು ಫೆ.15 ರಂದು ಅಸ್ತಿತ್ವಕ್ಕೆ ಬರಲಿದ್ದು, ಇದರ ಉದ್ಘಾಟನೆಯು ಎಪಿಎಂಸಿ ರಸ್ತೆಯಲ್ಲಿನ ಸಿಟಿ ಆಸ್ಪತ್ರೆಯ ಬಳಿಯ ಡಾಯಸ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೆರವೇರಲಿದೆ.
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈಯವರಿಂದ ನೂತನ ಕಛೇರಿ ಉದ್ಘಾಟನೆಗೊಳ್ಳಲಿದೆ. ಆಶೀರ್ವಚನೆಯನ್ನು ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್ ರವರು ನೆರವೇರಿಸಲಿರುವರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಪುತ್ತೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಕೆ.ರವರು ಕಂಪ್ಯೂಟರ್ ಉದ್ಘಾಟನೆಯನ್ಬು ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಂಗಳೂರು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್, ಸುದಾನ ವಿದ್ಯಾಸಂಸ್ಥೆಯ ಸಂಚಾಲಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೆ|ವಿಜಯ ಹಾರ್ವಿನ್, ಸಾಲ್ಮರ ಮೌಂಟನ್ ವ್ಯೂ ವಿದ್ಯಾಸಂಸ್ಥೆಯ ಅಧ್ಯಕ್ಷ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಪಿ ಅಹಮದ್ ಹಾಜಿ, ಸಂಪ್ಯ ಅಕ್ಷಯ ಕಾಲೇಜು ಅಧ್ಯಕ್ಷ ಜಯಂತ್ ನಡುಬೈಲು, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ, ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಲಿಲ್ಲಿ ಪಾಯಿಸ್, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಐತ್ತಪ್ಪ ನಾಯ್ಕ, ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಮೇಶ್ ರಾಯಿ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಕಡಬ ತಾಲೂಕು ಸಹಕಾರಿ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ತಾಲೂಕು ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಮೌರಿಸ್ ಮಸ್ಕರೇನ್ಹಸ್, ಎಪಿಎಂಸಿ ರಸ್ತೆ ಡಾಯಸ್ ಕಾಂಪ್ಲೆಕ್ಸ್ ಮಾಲಕ ದೀಪಕ್ ಡಾಯಸ್ ರವರೊಂದಿಗೆ ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ ಕಾಲೇಜುಗಳ ಶೈಕ್ಷಣಿಕ ಸಂಘದ ಅಧ್ಯಕ್ಷ, ಪದಾಧಿಕಾರಿಗಳು, ಸರ್ವ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಪುತ್ತೂರು ಶಿಕ್ಷಕರ ಸಹಕಾರ ಸಂಘದ ಮುಖ್ಯ ಪ್ರವರ್ತಕ ಮಾಮಚ್ಚನ್ ಎಂ ಹಾಗೂ ಪ್ರವರ್ತಕರು, ಸದಸ್ಯರು, ಸಿಬ್ಬಂದಿ ವರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.