ಮಂಗಳೂರು ರಾಮಕೃಷ್ಣ ಮಿಷನ್ ಬಾಲಕಾಶ್ರಮದಲ್ಲಿ ದಾಖಲಾತಿ ಪ್ರಾರಂಭ

0

ಶಿಕ್ಷಣ, ಊಟ, ವಸತಿ ಉಚಿತ
ಅರ್ಜಿ ಸಲ್ಲಿಸಲು ಏ.30 ಕೊನೆಯ ದಿನ

ಪುತ್ತೂರು: ಗ್ರಾಮೀಣ ಪ್ರದೇಶದ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಆರಂಭಗೊಂಡಿರುವ ಮಂಗಳೂರಿನ ರಾಮಕೃಷ್ಣ ಮಿಷನ್ ಬಾಲಕಾಶ್ರಮದಲ್ಲಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 7ನೇ ತರಗತಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಗಂಡು ಮಕ್ಕಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 8 ನೇ ತರಗತಿಗೆ ಮಾತ್ರ ಪ್ರವೇಶ ನೀಡುವುದಾಗಿದ್ದು ಮೊದಲ ಆದ್ಯತೆಯನ್ನು ದ.ಕ, ಉಡುಪಿ, ಕಾಸರಗೋಡು, ಉ.ಕ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ರಾಮಕೃಷ್ಣ ಮಿಷನ್ ಬಾಲಕಾಶ್ರಮದಲ್ಲಿ ಆಶ್ರಮದ ವಾತಾವರಣದಲ್ಲಿ ಸ್ವಾಮೀಜಿಯವರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಇನ್ನಿತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮುಂದುವರಿಯಲು ತರಬೇತಿ ನೀಡಲಾಗುತ್ತದೆ. ಶಿಕ್ಷಣ, ಊಟ, ವಸತಿ ಉಚಿತವಾಗಿ ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳು ತಮ್ಮ ಜೀವನಕ್ಕೆ ಅವಶ್ಯಕವಾದ ಎಲ್ಲಾ ಕೆಲಸಗಳನ್ನು ಕಲಿಯುವುದರೊಂದಿಗೆ ಅವರ ಸರ್ವತೋಮುಖ ಬೆಳವಣಿಗೆಗೆ ಅವಕಾಶ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಏ.30 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ರಾಮಕೃಷ್ಣ ಮಿಷನ್ ಬಾಲಕಾಶ್ರಮದ ಕಚೇರಿಯನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 12ಗಂಟೆ ಮತ್ತು ಸಂಜೆ 4 ರಿಂದ 6 ಗಂಟೆಯವರೆಗೆ ಅಥವಾ ದೂರವಾಣಿ ಸಂಖ್ಯೆ 0824 241 4216ನ್ನು ಸಂಪರ್ಕಿಸಬಹುದೆಂದು ಎಂದು ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದಜೀರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here