ಮುರ: ರೈಲು ಡಿಕ್ಕಿಯಾಗಿ ಹಳಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿ ಸಾವು

ಪುತ್ತೂರು: ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರಿಗೆ ರೈಲು ಡಿಕ್ಕಿಯಾದ ಘಟನೆ ಫೆ.14ರ ಸಂಜೆ ನಡೆದಿದೆ. ವಿಜಯಪುರಕ್ಕೆ ತೆರಳುತ್ತಿದ್ದ ರೈಲು, ಹಳಿ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರೈಲು ನಿಲ್ಲಿಸಿದ ಲೋಕೋ ಪೈಲೆಟ್‌ ಗಾಯಾಳುವನ್ನು ಅದೇ ಟ್ರೈನಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ತಂದಿದ್ದಾರೆ. ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದು, ಆಂಬ್ಯುಲೆನ್ಸ್‌ ತಲುಪುವಷ್ಟರಲ್ಲಿ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ. ಮೃತ ವ್ಯಕ್ತಿಯನ್ನು ಯಾರೆಂದು ಇನ್ನೂ ಗುರುತಿಸಲಾಗಿಲ್ಲ. ಮೃತ ದೇಹ ರೈಲ್ವೇ ಇಲಾಖೆ ಅಧಿಕಾರಿಗಳ ಸುಪರ್ದಿಯಲ್ಲಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ … Continue reading ಮುರ: ರೈಲು ಡಿಕ್ಕಿಯಾಗಿ ಹಳಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿ ಸಾವು