ನಾಳೆ(ಫೆ.16): ಸಂಪ್ಯ ಶ್ರೀ ಅನ್ನಪೂರ್ಣೇಶ್ವರಿ ದೇವರ ಜಾತ್ರೋತ್ಸವ, ಫೆ.17ರ ಸಂಜೆಯಿಂದ ಒತ್ತೆಕೋಲ

0

ಪುತ್ತೂರು: ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಫೆ.16ರಂದು ಶ್ರೀ ಅನ್ನಪೂರ್ಣೇಶ್ವರಿ ದೇವರ ಜಾತ್ರೋತ್ಸವ ಆರಂಭಗೊಳ್ಳಲಿದೆ. ಫೆ.17ರ ಸಂಜೆಯಿಂದ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ.
ಫೆ.16ರಂದು ಬೆಳಿಗ್ಗೆ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ದೇವರ ಜಾತ್ರೋತ್ಸವ ಆರಂಭಗೊಳ್ಳಲಿದ್ದು, ಬೆಳಿಗ್ಗೆ ಗಣಪತಿ ಹೋಮ, ನಾಗತಂಬಿಲ, ಮಹಾಪೂಜೆ, ಸಾರ್ವಜನಿಕ ಅನ್ನಸಂಪರ್ತಣೆ ನಡೆಯಲಿದೆ. ಸಂಜೆ ಶ್ರೀ ದೇವರ ಉತ್ಸವ ಬಲಿ ಹೊರಟು, ಪೇಟೆ ಸವಾರಿ, ಕಟ್ಟೆಪೂಜೆ ನಡೆಯಲಿದೆ. ಫೆ.17ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು, ರಥೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಸಾರ್ವಜನಿಕ ಅನ್ನಸಂರ್ಪಣೆ ನಡೆಯಲಿದೆ. ಅಂದು ಸಂಜೆ ಕ್ಷೇತ್ರದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಸಂಜೆ ಗಂಟೆ 7ರಿಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಿಂದ ದೈವದ ಭಂಡಾರ ಬರವುದು, ಬಳಿಕ ಮೇಲೇರಿಗೆ ಬೆಂಕಿ ಕೊಡುವುದು, ರಾತ್ರಿ ಗಂಟೆ 9.30ಕ್ಕೆ ಕುಳಿಚಟ್ಟು ದೈವ ಪ್ರಾರಂಭ, ರಾತ್ರಿ ಗಂಟೆ 11.30ರಿಂದ ಊರ ಕಲಾವಿದರಿಂದ ಸಾಂಸ್ಕೃತಿಕ ವೈಭವ, ಫೆ.18ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವ ಮೇಲೇರಿಗೆ ಬೀಳುವುದು, ಬಾರಣೆ, ಮಾರಿಕಳೆ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 6.30 ರಿಂದ ಗುಳಿಗ ದೈವದ ನೇಮೋತ್ಸವ ನಡೆಯಲಿದೆ ಎಂದು ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಸಮಿತಿ ಅಧ್ಯಕ್ಷ ಮಂಜಪ್ಪ ರೈ ಬಾರಿಕೆ ಮತ್ತು ಶ್ರೀ ವಿಷ್ಣುಮೂರ್ತಿ ಅನ್ನಪೂಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here