ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ ಎಂಬಲ್ಲಿ ಫೆ.14ರ ರಾತ್ರಿ ನಡೆದಿದೆ.
ಪೆರಿಯಡ್ಕ ನಿವಾಸಿ ಅತ್ತಾವುಲ್ಲಾ (22) ಮೃತ ಯುವಕ.
ಅತ್ತಾವುಲ್ಲಾ ತಾಯಿಯೊಂದಿಗೆ ವಾಸವಾಗಿದ್ದು, ಮಡಂತ್ಯಾರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದ. ಮಾನಸಿಕ ಖಿನ್ನತೆಗೊಳಗಾದವನಂತೆ ವರ್ತಿಸುತ್ತಿದ್ದ ಈತ ಸುಮಾರು ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿಯೇ ಇದ್ದ. ಫೆ.14ರಂದು ರಾತ್ರಿ ಈತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ಮನೆಗೆ ಬಂದಾಗ ಈತ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಅತ್ತಾವುಲ್ಲಾ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ, ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.