ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು

0

ಉಪ್ಪಿನಂಗಡಿ: ಪ್ರತಿಭಾನ್ವಿತ ಕಾಲೇಜು ವಿದ್ಯಾರ್ಥಿನಿಯೋರ್ವರು ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತ ಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.

ಕರ್ವೇಲ್‌ನಲ್ಲಿ ವರ್ತಕರಾಗಿರುವ ದಾವೂದು ಎಂಬವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿ. ಈಕೆ ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್‌ನ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸಕ್ತ  ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದರು. ಬುಧವಾರ ತಡ ರಾತ್ರಿ ವರೆಗೆ ಅಭ್ಯಾಸದಲ್ಲಿ  ನಿರತರಾಗಿದ್ದ ಈಕೆ ಬಳಿಕ ನಿದ್ರಿಸಿದ್ದು, ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಎಬ್ಬಿಸಲು ಹೋದಾಗ ಮೃತಪಟ್ಟಿದ್ದರು. ಮಲಗಿದಲ್ಲೇ ಹೃದಯಾಘಾತಕ್ಕೀಡಾಗಿ ಈಕೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತಳು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here