ಉಪ್ಪಿನಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ನ್ಯಾಯೋಚಿತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಫೆ.18 ರಂದು ಅಪರಾಹ್ನ 3 ಗಂಟೆಗೆ ಉಪ್ಪಿನಂಗಡಿಯ ಎಚ್. ಎಂ. ಅಡಿಟೋರಿಯಂನ ವಠಾರದಲ್ಲಿ ಬೃಹತ್ ಜನಾಂದೋಲನ ಸಭೆ ನಡೆಯಲಿದೆ ಎಂದು ಸಾಮಾಜಿಕ ಹೋರಾಟಗಾರ ಅಲಿಮಾರ ಜತೀಂದ್ರ ಶೆಟ್ಟಿ ತಿಳಿಸಿದ್ದಾರೆ.
ಈ ಸಂಬಂಧ ಕರೆಯಲಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸೌಜನ್ಯ ಎಂಬ ಅಮಾಯಕ ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಅತ್ಯಾಚಾರ ಪ್ರಕರಣದ ಬಗ್ಗೆ ಸರಕಾರ ಮರು ತನಿಖೆಯನ್ನು ನಡೆಸಬೇಕು. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಈ ಮೂಲಕ ಸಮಾಜದಲ್ಲಿ ಮೂಡಿರುವ ಅಪನಂಬಿಕೆಗಳನ್ನು ತೊಡೆದು ಹಾಕಬೇಕೆಂದು ಸರಕಾರವನ್ನು ಅಗ್ರಹಿಸಲಾಗುವುದು. ಜನಾಂದೋಲನ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣವರ್, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ಕುಸುಮಾವತಿ, ದಿನೇಶ್ ಗಾಣಿಗ ಮತ್ತಿತರರು ಭಾಗವಹಿಸಲಿದ್ದಾರೆ. ಪ್ರಜಾಪ್ರಭುತ್ವ ವೇದಿಕೆ ಮತ್ತು ಸೌಜನ್ಯ ಹೋರಾಟ ಸಮಿತಿ ಉಪ್ಪಿನಂಗಡಿ ಇವುಗಳ ಸಂಯುಕ್ತಾಶ್ರಯದಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ಮುಂದಾಳುಗಳಾದ ಚಿದಾನಂದ ಪೆರಿಯಡ್ಕ, ಸುಚಿತ್ ಬೊಳ್ಳಾವು, ನಿಶಾಂತ್ ಪೆರಿಯಡ್ಕ, ಸಂದೀಪ್ ಕುಪ್ಪೆಟ್ಟಿ, ಕಿರಣ್ ಪುಳಿತ್ತಡಿ ಉಪಸ್ಥಿತರಿದ್ದರು.