ಪುತ್ತೂರು: ಇಲ್ಲಿನ ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳವು ಫೆ.12 ಹಾಗೂ 13 ರಂದು ನೂರಾರು ವಿದ್ಯಾರ್ಥಿಗಳ ಸಮಾಗಮ, ವಿವಿಧ ಪ್ರಾತ್ಯಕ್ಷಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಫೆ.12ರಂದು ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್, ಶಾಲಾ ಸುರಕ್ಷಾ ಸಮಿತಿಯ ಅಧ್ಯಕ್ಷ ಸತೀಶ್ ಆರ್, ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ನೇತೃತ್ವವಹಿಸಿಕೊಂಡ ಶಿಕ್ಷಕ ಶಿಕ್ಷಕಿಯರ ಉಪಸ್ಥಿತರಿದ್ದರು. ಬಳಿಕ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಸಂಚಾಲಕಿ ವಂ. ಭಗಿನಿ ಪ್ರಶಾಂತಿ ಬಿ.ಎಸ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ಧೇಶಕ ಡಾ.ಯು.ಪಿ ಶಿವಾನಂದ, ನಗರ ಸಭಾ ಸದಸ್ಯೆ ಶಶಿಕಲಾ, ನಿವೃತ್ತ ಸೈನಿಕರ ಸಂಘದ ಗೌರವಾಧ್ಯಕ್ಷ ಕರ್ನಲ್ ಡಿ.ಜಿ ಭಟ್, ನಿವೃತ್ತ ಶಿಕ್ಷಕಿ ಮೇರಿ ಡಿಸಿಲ್ವ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಅಗ್ನಿಶಾಮಕ ದಳವರಿಂದ ಠಾಣಾಧಿಕಾರಿ ರುಕ್ಮಯ್ಯ ಗೌಡ ನೇತೃತ್ವದಲ್ಲಿ ಕಾರ್ಯಾಚರಣೆಯ ಕುರಿತ ಪ್ರಾತ್ಯಕ್ಷಿಕೆ ನೆರವೇರಿತು. ನಂತರ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ಮಕ್ಕಳಿಂದ ಗೂಡುದೀಪ ರಚನೆ, ನಕ್ಷತ್ರ ರಚನೆ, ರಾಷ್ಟ್ರಧ್ವಜದ ಚಿತ್ರ ರಚನೆ, ಎಲೆಗಳಿಂದ ಆಕೃತಿ ತಯಾರಿ ನಡೆಯಿತು. ರಂಗಬೆಳಕು ತಂಡ ಪುತ್ತೂರು ವತಿಯಿಂದ ಕೃಷ್ಣಪ್ಪ ಬಂಬಿಲ ನೇತೃತ್ವದಲ್ಲಿ ಜಾಗೃತಿ ಗೀತೆಗಳ ಗಾಯನ ನಡೆಯಿತು.
ಸಂಜೆ ದರ್ಬೆ ವೃತ್ತದ ಬಳಿಯಿಂದ ಶಾಲೆಯ ತನಕ 352 ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ ನಡೆಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್ ಪಥ ಸಂಚಲನವನ್ನು ಉದ್ಘಾಟಿಸಿದರು. ನಂತರ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಕರೋಕೆ ಹಾಡುಗಳ ಸುಮಧುರ ಗಾಯನ ನೆರವೇರಿತು.
ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಉದ್ಘಾಟಿಸಿದರು. ಶಾಲಾ ಸಂಚಾಲಕಿ ವಂ. ಭಗಿನಿ ಪ್ರಶಾಂತಿ ಬಿ.ಎಸ್ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸ್ಕೌಟ್, ಗೈಡ್, ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ವಿದ್ಯಾ ಆರ್.ಗೌರಿ, ಪಾಪೆಮಜಲು ಹಿ.ಪ್ರಾ ಶಾಲಾ ಶಿಕ್ಷಕಿ ಮೇಬಲ್ ಡಿ’ಸೋಜ, ಸಿಆರ್‌ಪಿ ಶಶಿಕಲಾ, ಅಮರ್ ಅಕ್ಬರ್ ಅಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿಯ ಸ್ಥಾಪಕಾಧ್ಯಕ್ಷರಝಾಕ್ ಬಪ್ಪಳಿಗೆ, ಶಾಲಾ ದಾನಿಗಳಾದ ಸುನೀತಾ ದಲ್ಮೇಡಾ, ರಕ್ಷಕ-೦ಶಿಕ್ಷಕ ಸಂಘದ ನಿಕಟಪೂರ್ವ ಉಪಾಧ್ಯಕ್ಷ ರಘುನಾಥ ರೈ, ಪುತ್ತೂರು ಸ್ಕೌಟ್, ಗೈಡ್, ಸ್ಥಳೀಯ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ವೇದಾವತಿ, ಉಪಾಧ್ಯಕ್ಷೆ ಡೋರತಿ ಮೇರಿ ಡಿ’ಸೋಜ, ನಿವೃತ್ತ ಶಿಕ್ಷಕಿ ಮೇರಿ ಡಿಸಿಲ್ವ, ಲಿಡಿಯಾ ಮರಿಯಾ ರಸ್ಕೀನ್ಹ, ಐರಿನ್ ವೇಗಸ್, ಹಿರಿಯ ವಿದ್ಯಾರ್ಥಿ ಡಾ. ಶ್ರೀಪ್ರಕಾಶ್, ಪೋಷಕರಾದ ಡಾ ವಿಜಯ ಸರಸ್ವತಿ, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್, ಶಾಲಾ ಸುರಕ್ಷಾ ಸಮಿತಿಯ ಅಧ್ಯಕ್ಷ ಸತೀಶ್ ಆರ್, ಹಾಗೂ ಭಗಿನಿ ಫೆಲ್ಸಿ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಳಿಕ ೩೫೨ ವಿದ್ಯಾರ್ಥಿಗಳ ಭಾಗವಹಿಸುವಿಕೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ಫೆ.13ರಂದು ಬಿ.ಪಿ ಸಿಕ್ಸ್ ವ್ಯಾಯಾಮ, ಸರ್ವಧರ್ಮ ಪ್ರಾರ್ಥನೆ ನಡೆಯಿತು. ಉಪಾಹಾರದ ಬಳಿಕ ಬೆಂಕಿ ಬಳಸದ ಅಡುಗೆ ಗಮನ ಸೆಳೆಯಿತು. ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯ ಸಂಚಾಲಕ ಪ್ರವೀಣ್ ವರ್ಣಕುಟೀರ ಅವರಿಂದ ಮುಖವಾಡ ತಯಾರಿ, ಗೊಂಬೆ ತಯಾರಿ, ಕರಕುಶಲ ವಸ್ತುಗಳ ಪ್ರಾತಕ್ಷಿಕೆ ನೆರವೇರಿತು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್, ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳದ ನಾಯಕಿ ವಿಲ್ಮಾ ಫೆರ್ನಾಂಡಿಸ್, ಸ್ಕೌಟ್ಸ್ ಶಿಕ್ಷಕ ಬಾಲಕೃಷ್ಣ ಪೊರ್ದಾಲ್, ಸ್ಕೌಟ್ ಶಿಕ್ಷಕಿ ಭವ್ಯ, ಬುಲ್ ಬುಲ್ ಶಿಕ್ಷಕಿಯರಾದ ಜೋಸ್ಲಿನ್ ಪೈಸ್, ಮಮತಾ ಮತ್ತು ದೀಕ್ಷಾ, ಕಬ್ ಶಿಕ್ಷಕಿಯರಾದ ಸುಶ್ಮಿತಾ ಮತ್ತು ದಿವ್ಯ, ಗೈಡ್ ಶಿಕ್ಷಕಿ ನಳಿನಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.