ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ನಾಟಕ ಪ್ರದರ್ಶನ
ನಿಡ್ಪಳ್ಳಿ; ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಫೆ.16 ರಂದು ನಿಡ್ಪಳ್ಳಿ ಗ್ರಾಮ ಪಂಚಾಯತಿಗೆ ಆಗಮಿಸಿತು.ರೆಂಜ ಕಾಲೇಜು ಕ್ರಾಸ್ ರಸ್ತೆ ಬಳಿಯಿಂದ ಆರಂಭವಾದ ಜಾಥಾವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಾಥಾಕ್ಕೆ ಚಾಲನೆ ನೀಡಿದರು.
ಗ್ರಾಮ ಪಂಚಾಯತಿಗೆ ರಥವನ್ನು ಬರಮಾಡಿಕೊಂಡು ನಂತರ ದೀಪ ಬೆಳಗಿಸಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣ ಇವರು ಸಂವಿಧಾನ ಜಾಗೃತಿ ಜಾಥಾದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಟ್ಟಂಪಾಡಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪರಮೇಶ್ವರಿ ಸಂವಿದಾನ ಪೀಠಿಕೆ ವಾಚಿಸಿದರು.
ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ; ಸಂವಿಧಾನದ ಕುರಿತು ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು.ನೊಡೆಲ್ ಅಧಿಕಾರಿ ತಾಲೂಕು ಎ.ಡಿ.ಎಲ್.ಅರ್ ಶ್ರೀನಿವಾಸ ಮೂರ್ತಿ, ಪಂಚಾಯತ್ ಸದಸ್ಯರಾದ ಅವಿನಾಶ್ ರೈ, ಸತೀಶ್ ಶೆಟ್ಟಿ, ಗ್ರೆಟಾ ಡಿ’ ಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಾಟಕ ಪ್ರದರ್ಶನ;ಸಂವಿಧಾನದ ಅರಿವು ಮೂಡಿಸುವ ಬಗ್ಗೆ ಮತ್ತು ಜನ ಸಾಮಾನ್ಯರಿಗೆ ಅರೋಗ್ಯ, ಶಿಕ್ಷಣ ಮತ್ತು ರಕ್ಷಣೆ ಎಷ್ಟು ಮುಖ್ಯ ಎಂಬ ಬಗ್ಗೆ ಗಿರೀಶ್ ನಾವಡ ಮಂಗಳೂರು ಮತ್ತು ತಂಡದಿಂದ ನಾಟಕದ ಪ್ರದರ್ಶನ ನಡೆಯಿತು.
ಪಿಡಿಒ ಸಂಧ್ಯಾಲಕ್ಷ್ಮಿ ಸ್ವಾಗತಿಸಿ ವಂದಿಸಿದರು. ಆರೋಗ್ಯ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆ, ನಿಡ್ಪಳ್ಳಿ, ಮುಂಡೂರು, ಚೂರಿಪದವು ಪ್ರಾಥಮಿಕ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡರು.ಪಂಚಾಯತ್ ಸಿಬ್ಬಂದಿಗಳಾದ ರೇವತಿ, ಸಂಶೀನಾ, ವಿನೀತ್ ಕುಮಾರ್, ಜಯ ಕುಮಾರಿ ಸಹಕರಿಸಿದರು.