ಪುತ್ತೂರು: 75ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ನೇತೃತ್ವದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಚಾಲಕತ್ವದಲ್ಲಿ ನಡೆಸಿದ ಪುತ್ತೂರು ತಾಲೂಕು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಶಾಲಾ ಮಟ್ಟದಲ್ಲಿ ನಡೆಸಿದ ಸ್ಪರ್ಧೆಯಲ್ಲಿ ಮರೀಲ್ ಇ ಎಸ್‌ಆರ್ ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿಗಳು ಹಲವಾರು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳಾದ 6ನೇ ತರಗತಿಯ ಝೀಶಾನ್ ಇಬ್ರಾಹಿಂ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಪ್ರಬಂಧ ಸ್ಪರ್ಧೆ ದ್ವಿತೀಯ ಸ್ಥಾನ ಪಡೆದಿದ್ದು 6ನೇ ತರಗತಿಯ ಮೊಹಮ್ಮದ್ ರಾಫಿದ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
5ನೇ ತರಗತಿಯ ನೆಫೀಸ ಫಿಧಾ ಚಿತ್ರ ಕಲೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು 6ನೇ ತರಗತಿಯ ಆಯಿಷಾತ್ ಸಲ್ವಾ ಭಾಷಣ ಸ್ಪರ್ಧೆ ಹಾಗೂ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 6ನೇ ತರಗತಿಯ ತಾನಿಶ್ ಹಾಗೂ ತನ್ವಿಝ ಚಿತ್ರ ಕಲೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು 6ನೇ ತರಗತಿಯ ಮರಿಯಮ್ ಅಸ್ನಾ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಇಎಸ್‌ಆರ್ ಶಾಲಾ ಮುಖ್ಯ ಶಿಕ್ಷಕಿ ತಾಜುನ್ನಿಸಾ ತಿಳಿಸಿದ್ದಾರೆ.