ಕಡಬ: ಕಾರು ಡಿಕ್ಕಿ-ಪಾದಚಾರಿ ಮಹಿಳೆಗೆ ಗಾಯ

0

ಕಡಬ: ಸ್ವಿಫ್ಟ್ ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡಬದಲ್ಲಿ ಫೆ.15ರಂದು ಸಂಜೆ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ಸುಮಿತ್ರಾ ಎಂದು ಗುರುತಿಸಲಾಗಿದೆ. ಇವರು ಕಡಬ ಪೇಟೆಯಲ್ಲಿರುವ ಲಕ್ಷ್ಮೀ ಎಂಟರ್‌ಪ್ರೈಸಸ್‌ನ ಎದುರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಉಪ್ಪಿನಂಗಡಿ ಕಡೆಯಿಂದ ಬಂದ ಅಬ್ದುಲ್ ಸಮೀರ್ ಎಂಬವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರು (ಕೆಎ20, ಝೆಡ್5034) ಡಿಕ್ಕಿಯಾಗಿದೆ. ಗಾಯಗೊಂಡಿರುವ ಸುಮಿತ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೋಡಿಂಬಾಳ ನಿವಾಸಿ ಪುಷ್ಪರಾಜ್ ಎಂಬವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here