ನಾಳೆ(ಫೆ.19) ಪುತ್ತೂರಿನಿಂದ ಒಡಿಯೂರು ರಥೋತ್ಸವಕ್ಕೆ ಉಚಿತ ಬಸ್

0

ಪುತ್ತೂರು: ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ ‘ಸಿರಿರಾಮೆ’ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಫೆ. 19ರಂದು ನಡೆಯುವ ರಥೋತ್ಸವಕ್ಕೆ ಭಕ್ತರಿಗೆ ಪುತ್ತೂರಿನಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಫೆ. 19ರಂದು ಬೆಳಿಗ್ಗೆ ಗಂಟೆ 9ಕ್ಕೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಒಡಿಯೂರಿಗೆ ಬಸ್ ಹೊರಡಲಿದ್ದು, ಭಕ್ತರು ಉಚಿತ ಪ್ರಯಾಣದ ಸೌಲಭ್ಯವನ್ನು ಸದುಪಯೋಗ ಪಡೆಯುವಂತೆ ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಪುತ್ತೂರು ಘಟಕದ ಅಧ್ಯಕ್ಷ ಸುಧೀರ್ ನೋಂಡಾ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here