ಬಿಳಿನೆಲೆ ಗ್ರಾಮ ಪಂಚಾಯತ್‌ನಲ್ಲಿ ಸಂವಿಧಾನ ಜಾಗೃತಿ ಜಾಥಾ

0

ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ವೈಭವದ ಮೆರವಣಿಗೆ

ಕಡಬ: ಪುತ್ತೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ, ಬಿಳಿನೆಲೆ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆ.18ರಂದು ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್‌ಗೆ ಆಗಮಿಸಿತು. ಬಿಳಿನೆಲೆ ಪಟ್ಟಣದಿಂದ ಗ್ರಾಮ ಪಂಚಾಯತ್ ತನಕ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ವೈಭವದ ಮೆರವಣಿಗೆಯಲ್ಲಿ ಜಾಥಾ ತೆರಳಿತು.


ಈ ಸಂದರ್ಭದಲ್ಲಿ ಕಡಬ ತಾಲೂಕು ತಹಶೀಲ್ದಾರ್ ಪ್ರಭಾಕರ ಖಜೂರೆ, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ ಇ, ಹಿರಿಯ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾ ದಿನೇಶ್, ಉಪಾಧ್ಯಕ್ಷ ಶಿವಶಂಕರ್ ಕೆ, ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಮತ್ತಿತರರು ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪನೆ ಮಾಡಿ, ಜಾಥಾಕ್ಕೆ ಚಾಲನೆ ನೀಡಿದರು.


ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ, ಪಟ್ಟಣ ಪಂಚಾಯತ್ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ದಲಿತ ಸಮಿತಿಯ ಮುಂದಾಳುಗಳು, ಸಾಮಾಜಿಕ ಮುಂದಾಳುಗಳು, ಮೆಸ್ಕಾಂ ಸಿಬ್ಬಂದಿಗಳು, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಕಂದಾಯ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಕೃಷ್ಣ ಬಿ, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಪೊಲೀಸ್ ಇಲಾಖಾ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾ.ಪಂ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಕೃಷ್ಣ ಬಿ, ಪ್ರಾಸ್ತಾವಿಕ ಭಾಷಣ ಮಾಡಿದರು. ಉಪಸ್ಥಿತರಿದ್ದ ಅತಿಥಿಗಳಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಂತರ ಸಂವಿದಾನ ಪೀಠಿಕೆಯನ್ನು ಪಠಿಸಲಾಯಿತು. ಹಾಗೂ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here