ಪುತ್ತೂರು: ಅಂತರ್‌ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಹಾಗೂ ಐಸಿಎಆರ್-ಗೇರು ಸಂಶೋಧನಾಲಯ ನಿರ್ದೇಶನಾಲಯ ಪುತ್ತೂರು ಇದರ ಸಹಯೋಗದಲ್ಲಿ ಗೇರು ಆಧಾರಿತ ಬೆಳೆ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ ಫೆ.20 ರಂದು ಐಸಿಎಆರ್-ಡಿಸಿಆರ್ ಪುತ್ತೂರು ಇಲ್ಲಿ ನಡೆಯಲಿದೆ.
ಐಸಿಎಆರ್-ಡಿಸಿಆರ್ ಪುತ್ತೂರು ಇದರ ನಿರ್ದೇಶಕ ಡಾ.ಜೆ.ದಿನಕರ್ ಆಡಿಗರವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಿಕ್ರಂದತ್ತ, ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಜೈರಾಜ್ ಭಂಡಾರಿ, ರೋಟರಿ ಕ್ಲಬ್ ಪುತ್ತೂರು ನಿಯೋಜಿತ ಅಧ್ಯಕ್ಷ ಡಾ.ಶ್ರೀಪತಿ ರಾವ್ ಯು, ಸಂಪನ್ಮೂಲ ವ್ಯಕ್ತಿಯಾಗಿ ಐಸಿಎಆರ್-ಡಿಸಿಆರ್ ಪುತ್ತೂರು ಇದರ ನಿವೃತ್ತ ವಿಜ್ಞಾನಿ ಡಾ.ಯದುಕುಮಾರ್ ರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಜೈರಾಜ್ ಭಂಡಾರಿ, ಕಾರ್ಯದರ್ಶಿ ಸುಜಿತ್ ಡಿ.ರೈ, ಸಮುದಾಯ ಸೇವಾ ವಿಭಾಗದ ನಿರ್ದೇಶಕ ಸೋಮಶೇಖರ್ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.