ಪುತ್ತೂರು: ಕಾಂಗ್ರೆಸ್ಸಿನ ರಾಜ್ಯಮಟ್ಟದ ಸಮಾವೇಶದಲ್ಲಿ ನರೇಂದ್ರ ಮೋದಿ ಯವರು ಮತ್ತೆ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿಯಾಗುತ್ತಾರೆ ಎನ್ನುವ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷರು ನಿಮ್ಮದೇ ಸರಕಾರ ಈ ಹಿಂದೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಾಗ ದೇಶದಲ್ಲಿ ತುರ್ತುಪರಿಸ್ಥಿತಿಯನ್ನು ಹೇರಿಕೆ ಮಾಡಿದ ಇಂದಿರಾಗಾಂಧಿಯವರ ಸರ್ವಾಧಿಕಾರವನ್ನು ನೆನಪಿಸಿಕೊಳ್ಳುವುದು ಒಳ್ಳೆಯದು ಎಂದು ಪುತ್ತೂರು ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಏನು ಮಾಡಿದ್ದಾರೆ ಎಂದು ಪ್ರಶ್ನೆ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜಿಲ್ಲೆಯ ಅಭಿವೃದ್ಧಿಯನ್ನು ಮಾನ್ಯ ಸಂಸದರು ಮಾಡಿರುವುದರಿಂದಲೇ ನಿರಂತರ ಮೂರು ಸಲ ಅತ್ಯಧಿಕ ಬಹುಮತದಿಂದ ಜಿಲ್ಲೆಯ ಜನತೆ ಗೆಲ್ಲಿಸಿಕೊಂಡು ಬಂದಿದ್ದಾರೆ. ಮುಂದೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ಅಭ್ಯರ್ಥಿಯೇ ಅತ್ಯಧಿಕ ಬಹುಮತದಿಂದ ಗೆಲ್ಲುವುದರಲ್ಲಿ ಯಾವುದೇ ಸಂಶಯ ಬೇಡ ಎಂದು ಹೇಳಿದರು. ಬಜೆಟಿನಲ್ಲಿ ಅಲ್ಪಸಂಖ್ಯಾತರಿಗೆ ಬರಪೂರ ಅನುದಾನವನ್ನು ನೀಡಿರುವ ಸಿದ್ದರಾಮಯ್ಯನವರೇ ಈ ಹಿಂದೆ ನೀವು ಮುಖ್ಯಮಂತ್ರಿಯಾಗಿರುವಾಗ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರದಿಂದ ನಮ್ಮ ಭಾಗದ ಒಂದು ಶಾಲೆಗೆ ಬಿಸಿ ಊಟವನ್ನು ನೀಡಿದ ಯೋಜನೆಯನ್ನು ರದ್ದುಗೊಳಿಸಿದ ನೀವು ಇವತ್ತು ಅಕ್ಕಿಗಾಗಿ ಮಠ ಮಂದಿರದ ಮುಂದೆ ಕೈ ಚಾಚುವ ಪರಿಸ್ಥಿತಿಗೆ ಬಂದಿರುವಂತದ್ದು ನಾಚಿಕೆಗೇಡಿನ ಸಂಗತಿ ಎಂದು ಈ ಸಂದರ್ಭದಲ್ಲಿ ಹೇಳಿದರು.