ನಿರುದ್ಯೋಗದ ಚಿಂತೆ-ಖಿನ್ನತೆಗೆ ಒಳಗಾಗಿದ್ದ ಪುತ್ತೂರಿನ ಯುವಕನಿಂದ ಆತ್ಮಹತ್ಯೆಗೆ ಯತ್ನ-ಪಾಣೆಮಂಗಳೂರಿನ ಯುವಕರ ತಂಡದಿಂದ ಯುವಕನ ರಕ್ಷಣೆ

0

ಬಂಟ್ವಾಳ : ಪದವೀಧರನಾಗಿದ್ದರೂ ನಿರುದ್ಯೋಗಿಯಾಗಿದ್ದ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಫೆ.19(ಸೋಮವಾರ)ರಂದು ನಡೆದಿದ್ದು, ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.


ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರಕದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಲು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದುದನ್ನು ಗಮನಿಸಿದ ಸ್ಥಳೀಯ ನಿವಾಸಿಗಳಾದ ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆ ಪ್ರಯತ್ನದಿಂದ ದೂರಮಾಡಿದ್ದಾರೆ. ಬಳಿಕ ನಿಶ್ಚಿತ್‌ ನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕ ನಿಶ್ಚಿತ್‌ ನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here