ಪುತ್ತೂರು : ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ” ಫಿಲೋ ಚಿಯಾರಿಯೋ “-2024” ವಿದಾಯ ಕೂಟ ಸಮಾರಂಭವು ಫೆ .16 ರಂದು ಎಸ್ .ಜಿ .ಎಂ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ರೆ .ಫಾ ಸ್ಟ್ಯಾನಿ ಪಿಂಟೋ ಮಾತನಾಡಿ ವಿದ್ಯಾರ್ಥಿಗಳು ಸದಾ ಗುರಿಯತ್ತ ತಮ್ಮ ಚಿತ್ತವನ್ನು ನೀಡಬೇಕು, ವಿದ್ಯಾರ್ಥಿಗಳು ಜೀವನದಲ್ಲಿ ಕಂಡುಕೊಳ್ಳಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಭವಿಷ್ಯದಲ್ಲಿ ಬೇಕಾದ ಎಲ್ಲಾ ರೀತಿಯ ಸೌಲಭ್ಯ ನೀಡಲು ಸಂಸ್ಥೆ ಸದಾ ಸಿದ್ಧವಾಗಿರುತ್ತದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಪಿ .ಯು ಕಾಲೇಜಿನ ಪ್ರಾಚಾರ್ಯ ರೆ .ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ ವಿದ್ಯಾರ್ಥಿಗಳು ಬುದ್ದಿವಂತಿಕೆ ಹಾಗೂ ಕೌಶಲವನ್ನು ಹೆಚ್ಚಿಸಿ ಜೀವನದ ಹಾದಿಯಲ್ಲಿ ಸಾಗಬೇಕು. ಇದರೊಂದಿಗೆ ಪೋಷಕರು ಹಾಗೂ ಗುರು ಹಿರಿಯರಿಗೆ ಗೌರವವನ್ನು ನೀಡಬೇಕೆಂದು ಹೇಳಿದರು.
ಪಿ. ಯು ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಗೋವಿಂದ ಪ್ರಕಾಶ್, ವಿಜ್ಞಾನ ವಿಭಾಗದ ಡೀನ್ ಯಶವಂತ ಎಂ . ಡಿ ಮತ್ತು ಕಲಾ ವಿಭಾಗದ ಡೀನ್ ಭರತ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಸಿ .ಎ ಫೌಂಡೇಶನ್ ಕೋರ್ಸಿನಲ್ಲಿ ಪಾಸಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಹಾಗೂ ತರಗತಿಯಲ್ಲಿ ಪೂರ್ಣ ಹಾಜರಾತಿ ಹೊಂದಿದ ವಿದ್ಯಾರ್ಥಿ -ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ವಿತರಿಸಲಾಯಿತು.
ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಅಶ್ವಿನ್ ಎಂ , ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಿಂದ್ಯಶ್ರೀ ರೈ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸೃಜನ್ ಆಳ್ವ ಅನಿಸಿಕೆಯನ್ನು ವ್ಯಕ್ತಪಡಿಸಿದರು . ಆಂಗ್ಲ ಭಾಷಾ ಉಪನ್ಯಾಸಕಿ ಸತ್ಯಲತಾ ರೈ ಕಾರ್ಯಕ್ರಮ ನಿರೂಪಿಸಿ , ಆಂಗ್ಲ ಭಾಷಾ ಉಪನ್ಯಾಸಕಿ ಸುಮಾ .ಪಿ.ಆರ್ ಸ್ವಾಗತಿಸಿ,ಇತಿಹಾಸ ಉಪನ್ಯಾಸಕ ಶರತ್ ಆಳ್ವ ಚನಿಲ ಮತ್ತು ಸಂಖ್ಯಾಶಾಸ್ತ್ರ ಉಪನ್ಯಾಸಕ ಭರತ್ ಜಿ.ಪೈ ಪ್ರಾರ್ಥಿಸಿದರು .ಎಲೆಕ್ಟ್ರಾನಿಕ್ಸ್ ಉಪನ್ಯಾಸಕಿ ರೇಖಾ ವಂದಿಸಿದರು .ವಾಣಿಜ್ಯ ವಿಭಾಗದ ಉಪನ್ಯಾಸಕಿ ಫಿಲೋಮಿನಾ ಮೊಂತೇರೊ ಕಾರ್ಯಕ್ರಮ ಸಂಯೋಜಿಸಿದರು .