ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯದಿಂದ ಉಚಿತ ನೇತ್ರ ತಪಾಸಣಾ ಶಿಬಿರ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಮತ್ತು ಪ್ರಸಾದ್ ನೇತ್ರಾಲಯ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಫೆ.20 ರಂದು ಪುತ್ತೂರು ರಾಧಾಕೃಷ್ಣ ಬಿಲ್ಡಿಂಗ್ ನಲ್ಲಿನ ಪುತ್ತೂರು ರೋಟರಿ ಕಣ್ಣಿನ ಆಸ್ಪತ್ರೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಿತು.


ಪುತ್ತೂರು ರೋಟರಿ ಕ್ಲಬ್ ಈಗಾಗಲೇ ಬ್ಲಡ್ ಬ್ಯಾಂಕ್, ಡಯಾಲಿಸಿಸ್ ಕೇಂದ್ರ ಮುಂತಾದ ಶಾಶ್ವತ ಕೊಡುಗೆಗಳನ್ನು ನೀಡುತ್ತಾ ಬಂದಿದ್ದು ಇದೀಗ ಮತ್ತೊಂದು ಶಾಶ್ವತ ಯೋಜನೆಯಾದ ಕಣ್ಣಿನ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದೆ. ಈ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು ಈ ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುವುದು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಮಾಡಲಾಗುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ ಎಂದು ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಜೈರಾಜ್ ಭಂಡಾರಿರವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯದರ್ಶಿ ಸುಜಿತ್ ರೈ.ಡಿ, ಸಮುದಾಯ ಸೇವಾ ನಿರ್ದೇಶಕ ಸೋಮಶೇಖರ್ ರೈ, ಮಾಜಿ ಅಧ್ಯಕ್ಷ ಎ.ಜೆ ರೈ, ಉಮಾನಾಥ್ ಪಿ.ಬಿ, ರೋಟರಿ ಪುತ್ತೂರು ಚಾರಿಟೇಬಲ್ ಟ್ರಸ್ಟ್ ಪಿ.ಆರ್.ಒ ಕುಲದೀಪ್ ರವರು ಉಪಸ್ಥಿತರಿದ್ದರು.



42 ಫಲಾನುಭವಿಗಳು ಭಾಗಿ..
ಶಿಬಿರದಲ್ಲಿ ಈ ಬಾರಿ ಸುಮಾರು 42 ಮಂದಿ ಫಲಾನುಭವಿಗಳು ಭಾಗಿಯಾಗಿ ತಜ್ಞ ವೈದ್ಯರಿಂದ ಸೂಕ್ತ ಸಲಹೆ-ಸೂಚನೆಗಳನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here