ಟಿಪ್ಪರ್‌ ಮತ್ತು ಬೈಕ್‌ ನಡುವೆ ಡಿಕ್ಕಿ-ಬೈಕ್‌ ಸವಾರ ಗಂಭೀರ

0

ಪುತ್ತೂರು: ಟಿಪ್ಪರ್‌ ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ಹೊರವಲಯದ ಕಲ್ಲರ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಗೊಂಡ ಯುವಕನನ್ನು ಮುಕ್ವೆಯ ಸಫ್ವಾನ್‌ ಎಂದು ಗುರುತಿಸಲಾಗಿದ್ದು, ಆತನ ಕಾಲು ಮತ್ತು ತಲೆಗೆ ಗಂಭೀರವಾದ ಗಾಯವಾಗಿದೆ. ಅಪಘಾತದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here