ಸೌಜನ್ಯ ಪ್ರಕರಣದ ಮರು ತನಿಖೆ ಕೋರಿದ ಅರ್ಜಿ ವಿಚಾರಣೆ-ಸರಕಾರ, ಸಿಬಿಐಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

0

ಪುತ್ತೂರು: 12 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದ ಬಳಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯರವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಸೌಜನ್ಯರವರ ತಂದೆ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಶಸಿ ಚಂದಪ್ಪ ಗೌಡರವರು ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠದಲ್ಲಿ ನಡೆದಿತ್ತು.


ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್.ಬಾಲಕೃಷ್ಣ, ‘ಪ್ರಕರಣದಿಂದ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ.ಮೇಲ್ಮನವಿ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಪಡಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿಗಳು ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಽಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಽಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಽಕಾರಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪದಡಿ ಬಂಽತನಾಗಿ ಇತ್ತೀಚೆಗೆ ಸಿಬಿಐ ವಿಶೇಷ ನ್ಯಾಯಾಲಯದಿಂದ ದೋಷಮುಕ್ತಗೊಂಡಿರುವ ಕಾರ್ಕಳದ ಸಂತೋಷ್ ರಾವ್ ಅವರನ್ನೂ ಪ್ರತಿವಾದಿಯನ್ನಾಗಿಸಲಾಗಿದೆ.

ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಇದರೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಾರ್‌ಗೆ ಸೂಚಿಸಿತು.

LEAVE A REPLY

Please enter your comment!
Please enter your name here